fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Karnataka NewsNational

ರಾಜ್ಯವೇ ಬೆಚ್ಚಿಬೀಳಿಸುವ ಸುದ್ದಿ : ಹಳ್ಳದಲ್ಲಿ ತೇಲಿ ಬಂತು 7 ಭ್ರೂಣಗಳ ಮೃತದೇಹ! ಗಾಬರಿಯಾದ್ರು ಬಸ್ ನಿಲ್ದಾಣದಲ್ಲಿದ್ದ ಜನ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಬೆಳಗಾವಿ (ಜೂ 24): 7 ಭ್ರೂಣಗಳ (Neonatal Babies) ಮೃತದೇಹವನ್ನು (Dead Body) ಹಳ್ಳದಲ್ಲಿ ತೇಲಿ ಬಿಟ್ಟಿರುವ ಹೀನ ಕೃತ್ಯ ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. 7 ಭ್ರೂಣಗಳು ಮೃತದೇಹವನ್ನು ಕೀಚಕರು ಹಳ್ಳಕ್ಕೆ ಹಾಕಿ ಹೋಗಿದ್ದಾರೆ.
ಡಬ್ಬದಲ್ಲಿ ಹಾಕಿ ಹಳ್ಳಕ್ಕೆ ಬಿಡಲಾಗಿದ್ದು, ಶವ ನೋಡಿದ ಜನ ಹೌಹಾರಿದ್ದಾರೆ. ಸ್ಥಳಕ್ಕೆ ಮೂಡಲಗಿ ಪೊಲೀಸರ (Police) ಭೇಟಿ ಪರಿಶೀಲನೆ ನಡೆಸಿದ್ದಾರೆ. ಡಿಎಚ್‌ಒ ಡಾ.ಮಹೇಶ ಕೋಣಿ (Mahesh Koni) ಪ್ರತಿಕ್ರಿಯೆ ಈಗಾಗಲೇ ಗ್ರಾಮ ಪಂಚಾಯತಿಯಿಂದ ಸ್ಥಳೀಯ ಠಾಣೆಯಲ್ಲಿ ದೂರು ದಾಖಲಿಸುತ್ತಿದ್ದೇವೆ. ಇವೆಲ್ಲವೂ ಐದು ತಿಂಗಳ ಭ್ರೂಣಗಳಾಗಿವೆ. ಭ್ರೂಣಗಳನ್ನು ಈಗಾಗಲೇ ಸ್ಥಳೀಯ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಕೇಸ್ ದಾಖಲಾದ ಬಳಿಕ ಅವುಗಳನ್ನ ಬೆಳಗಾವಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (Laboratory) ತಂದು ಪರೀಕ್ಷೆ ಮಾಡಲಾಗುವುದು

ಒಟ್ಟು 5 ಡಬ್ಬಿಗಳಲ್ಲಿ 7 ಭ್ರೂಣಗಳು ಪತ್ತೆ

ಒಟ್ಟು 5 ಡಬ್ಬಿಗಳಲ್ಲಿ 7 ಭ್ರೂಣಗಳು ಪತ್ತೆಯಾಗಿದೆ. ಮೂಡಲಗಿ ಬಸ್ ನಿಲ್ದಾಣದ ಬಳಿ ಇರುವ ಹಳ್ಳದಲ್ಲಿ ಭ್ರೂಣಗಳ ಮೃತ ದೇಹಗಳು ಪತ್ತೆಯಾಗಿವೆ. ಮೃತದೇಹಗಳನ್ನು ಯಾರು ಎಸೆದಿದ್ದಾರೆ ಎಂಬುದು ಇನ್ನೂ ನಿಗೂಢವಾಗಿದೆ. ಮೃತದೇಹ ಕಂಡು ಮೂಡಲಗಿ ಜನರು ಹೌಹಾರಿದ್ದಾರೆ. ಸ್ಥಳಕ್ಕೆ ಮೂಡಲಗಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಡಿಎಚ್‌ಒ ಡಾ.ಮಹೇಶ ಕೋಣಿ ಹೇಳಿಕೆ

ಮೂಡಲಗಿ ಪಟ್ಟಣದ ಸೇತುವೆ ಕೆಳಗೆ ಡಬ್ಬಿಯಲ್ಲಿ ಮೃತ ಭ್ರೂಣಗಳು ಪತ್ತೆಯಾಗಿವೆ. ಇದು ಭ್ರೂಣ ಲಿಂಗ ಪತ್ತೆ ಮತ್ತು ಭ್ರೂಣಗಳ ಹತ್ಯೆ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಈಗಾಗಲೇ ಗ್ರಾಮ ಪಂಚಾಯತಿಯಿಂದ ಸ್ಥಳೀಯ ಠಾಣೆಯಲ್ಲಿ ದೂರು ದಾಖಲಿಸುತ್ತಿದ್ದೇವೆ. ಇವೆಲ್ಲವೂ ಐದು ತಿಂಗಳ ಭ್ರೂಣಗಳಾಗಿವೆ. ಭ್ರೂಣಗಳನ್ನು ಈಗಾಗಲೇ ಸ್ಥಳೀಯ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಕೇಸ್ ದಾಖಲಾದ ಬಳಿಕ ಅವುಗಳನ್ನ ಬೆಳಗಾವಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ತಂದು ಪರೀಕ್ಷೆ ಮಾಡಲಾಗುವುದು. ಇದನ್ನ ಯಾರು ಮಾಡಿದ್ದಾರೆ, ಎಲ್ಲಿಂದ ಬಂದಿದ್ದು ಎನ್ನುವ ಬಗ್ಗೆ ತನಿಖೆ ಮಾಡಲಾಗುವುದು. ಭ್ರೂಣಗಳ ಹತ್ಯೆ ಕುರಿತು ತನಿಖೆಗೆ ಒಂದು ತಂಡ ಸಹ ರಚನೆ ಮಾಡಲಾಗುವುದು. ಈ ಕುರಿತು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ತಂಡ ರಚನೆ ಮಾಡುತ್ತೇವೆ ಎಂದ್ರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published. Required fields are marked *

error: Content is protected !!
%d bloggers like this: