ನಿಮ್ಮ ನಗರದಲ್ಲಿ ಎಷ್ಟಿದೆ ಪೆಟ್ರೋಲ್-ಡೀಸೆಲ್ ದರ?

ನವದೆಹಲಿ, ಜೂನ್ 25: ದೇಶದಲ್ಲಿ ಪ್ರತಿದಿನ ಇಂಧನ ದರ ಪರಿಷ್ಕರಣೆ ಮಾಡಲು ಆರಂಭಿಸಿದ್ದ ಸರ್ಕಾರಿ ತೈಲ ಕಂಪನಿಗಳು, ಪೆಟ್ರೋಲ್-ಡೀಸೆಲ್ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿವೆ. ಅದಾಗ್ಯೂ, ಜೂನ್ 25ರಂದು ಪೆಟ್ರೋಲ್, ಡೀಸೆಲ್ ದರದಲ್ಲಿ ಕೊಂಚ ಏರಿಳಿತ ಕಂಡು ಬಂದಿದೆ.
ಭಾರತದಲ್ಲಿ ನಾಲ್ಕೂವರೆ ತಿಂಗಳ ನಂತರದಲ್ಲಿ ಮೊದಲ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪರಿಷ್ಕರಣೆ ಮಾಡಲಾಗಿತ್ತು. ದೇಶದಲ್ಲಿ ಮಾರ್ಚ್ 22ರ ನಂತರದಲ್ಲಿ ಬರೋಬ್ಬರಿ 15 ಬಾರಿ ಏರಿಕೆ ಕಂಡಿದ್ದ ಇಂಧನ ದರವನ್ನು ಕೇಂದ್ರ ಸರ್ಕಾರ ಇಳಿಸಿದೆ. ಮೇ 21ರ ಶನಿವಾರ ಪೆಟ್ರೋಲ್ ಮೇಲೆ 8 ರೂಪಾಯಿ, ಡೀಸೆಲ್ ಮೇಲೆ 6 ರೂಪಾಯಿ ಅಬಕಾರಿ ಸುಂಕವನ್ನು ಕಡಿತಗೊಳಿಸಲಾಗಿದೆ. ಇದರಿಂದ ಪೆಟ್ರೋಲ್ ಬೆಲೆಯಲ್ಲಿ 9.50 ರೂಪಾಯಿ ಹಾಗೂ ಡೀಸೆಲ್ ದರದಲ್ಲಿ 7 ರೂಪಾಯಿ ಇಳಿಕೆಯಾಗಿದೆ.
ಕೇಂದ್ರ ಸರ್ಕಾರ ಅಬಕಾರಿ ಸುಂಕ ಕಡಿತಗೊಳಿಸಿದ ಬೆನ್ನಲ್ಲೇ ಹಲವು ರಾಜ್ಯ ಸರ್ಕಾರಗಳು ಸಹ ಇಂಧನ ದರವನ್ನು ಇಳಿಸಿವೆ. ಜೂನ್ 25ರ ಅಂಕಿ-ಅಂಶಗಳ ಪ್ರಕಾರ, ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಎಷ್ಟಿದೆ ಎಂಬುದನ್ನು ಈ ವರದಿಯಲ್ಲಿ ತಿಳಿದುಕೊಳ್ಳೋಣ.
ಭಾರತದ ಪ್ರಮುಖ ನಗರಗಳಲ್ಲಿ ಇಂಧನ ದರಗಳು
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 96.72 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.62 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 111.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.28 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 102.63 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.24 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 106.03 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 92.76 ರೂಪಾಯಿ ನಿಗದಿಯಾಗಿದೆ.
ಬೆಂಗಳೂರಿನಲ್ಲಿ ಇಂಧನ ದರ
ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 109.66 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.82 ರೂಪಾಯಿ ನಿಗದಿಯಾಗಿದೆ. ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 107.40 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 96.23 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 96.57 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.76 ರೂಪಾಯಿ ನಿಗದಿಯಾಗಿದೆ. ಇನ್ನು ಕರ್ನಾಟಕದ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 101.94 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 87.95 ರೂಪಾಯಿ ದಾಖಲಾಗಿದೆ.
ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಬದಲಾವಣೆ
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
ವಿಶ್ವ ಮಟ್ಟದಲ್ಲಿ ತೈಲ ಬೆಲೆಯಲ್ಲಿ ಏರಿಳಿತ ಹೇಗೆ?
ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಆದರೂ, ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್- ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಧನ ದರ ಕಡಿಮೆಯಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ. ಇಂದು ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್ಗೆ 109.70 ಯುಸ್ ಡಾಲರ್ನಂತೆ ವ್ಯವಹಾರ ನಡೆಸುತ್ತಿದೆ.