Belagavi: 7 ಭ್ರೂಣಗಳ ಪತ್ತೆ ಕೇಸ್, ಹೆರಿಗೆ ಆಸ್ಪತ್ರೆ, ಸ್ಕ್ಯಾನಿಂಗ್ ಸೆಂಟರ್ ಸೀಜ್

ಬೆಳಗಾವಿ (ಜೂ 25) : ಮೂಡಲಗಿ ಪಟ್ಟಣದ ಹಳ್ಳದಲ್ಲಿ7 ಭ್ರೂಣಗಳ ಮೃತದೇಹ (Neonatal Babies) ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಡಿಎಚ್ಒ ಮಹೇಶ (DHO Mahesh) ಕೋಣಿ ಅವರು ಪೊಲೀಸರ (Police) ನೇತೃತ್ವದಲ್ಲಿ ಮೂಡಲಗಿಯ ಸ್ಕ್ಯಾನಿಂಗ್, 6 ಮೆಟರ್ನಿಟಿ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿದ್ರು.
ವೆಂಕಟೇಶ ಮೆಟರ್ನಿಟಿ ಆಸ್ಪತ್ರೆಯನ್ನು (Venkatesha Maternity Hospital) ಸೀಜ್ ಮಾಡಿದ್ದಾರೆ. ಮೂರು ವರ್ಷಗಳಿಂದ ಈ ಆಸ್ಪತ್ರೆಯಲ್ಲಿ ಏಳು ಭ್ರೂಣಗಳ ಲಿಂಗ ಪತ್ತೆ ಮಾಡಿ ಹತ್ಯೆ ಮಾಡಿದ ಅನುಮಾನವಿದೆ. ಹೀಗಾಗಿ ಅಸ್ಪತ್ರೆ ಬಂದ್ ಮಾಡಿ ಇನ್ನಷ್ಟು ತನಿಖೆ (Investigation) ನಡೆಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು (Officer) ತಿಳಿಸಿದ್ದಾರೆ.
ಆಸ್ಪತ್ರೆ ಮೇಲೆ ದಾಳಿ ಮಾಹಿತಿ ತಿಳಿದು ಕೃತ್ಯ
ಈ ಹಿಂದೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಕೆಲ ಆಸ್ಪತ್ರೆ ಹಾಗೂ ಸ್ಕ್ಯಾನಿಂಗ್ ಸೆಂಟರ್ ಮೇಲೆ ದಾಳಿ ಮಾಡಲು ಸಿದ್ಧತೆ ನಡೆಸಿದ್ದರು. ತಮ್ಮ ಅಕ್ರಮಗಳು ಬಯಲಿಗೆ ಬರುವ ಭೀತಿಯಿಂದ ಆಸ್ಪತ್ರೆಯ ಸಿಬ್ಬಂದಿ ಈ ರೀತಿ ರಾತ್ರಿ ಭ್ರೂಣಗಳನ್ನು ಹಳ್ಳಕ್ಕೆ ಎಸೆದಿದ್ದಾರೆ. ಜೂನ್ 23ರ ರಾತ್ರಿಯೇ ಈ ಕೃತ್ಯ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ತಪ್ಪು ಒಪ್ಪಿಕೊಂಡ ಆಸ್ಪತ್ರೆ ಆಡಳಿತ ಮಂಡಳಿ
ಪತ್ತೆಯಾದ ಭ್ರೂಣಗಳು ತಮ್ಮದೇ ಆಸ್ಪತ್ರೆಯಲ್ಲಿ ತೆಗೆಯಲಾಗಿದೆ ಎಂದು ಆಸ್ಪತ್ರೆಯ ಆಡಳಿತ ಮಂಡಳಿಯವರು ತಪ್ಪು ಒಪ್ಪಿಕೊಂಡಿದ್ದಾರೆ. ಹೊಸ ಅಸ್ಪತ್ರೆಗೆ ಸ್ಥಳಾಂತರಗೊಳ್ಳುವ ಸಮಯದಲ್ಲಿ ಸಿಬ್ಬಂದಿ ನಿರ್ಲಕ್ಷದ ಕಾರಣ ಇದು ನಡೆದಿದೆ ಎಂದು ಆಸ್ಪತ್ರೆಯವರು ಹೇಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಭ್ರೂಣಗಳ ಲಿಂಗಪತ್ತೆ ಹಾಗೂ ಹತ್ಯೆಗೆ ನಿಖರ ಕಾರಣ ಏನು ಎಂಬ ಬಗ್ಗೆ ವಿಚಾರಣೆ ನಡೆದಿದೆ. ಮೂರು ವರ್ಷಗಳಿಂದ ಈ ಆಸ್ಪತ್ರೆಯಲ್ಲಿ ಏಳು ಭ್ರೂಣಗಳ ಲಿಂಗ ಪತ್ತೆ ಮಾಡಿ ಹತ್ಯೆ ಮಾಡಿದ ಅನುಮಾನವಿದೆ. ಹೀಗಾಗಿ ಅಸ್ಪತ್ರೆ ಬಂದ್ ಮಾಡಿ ಇನ್ನಷ್ಟು ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ.