Karnataka News
ಬೆಳಗಾವಿಯಲ್ಲಿ ಮತ್ತೊಂದು ಅಪಘಾತ; ನಾಲೆಗೆ ಉರುಳಿದ ಕ್ರೂಸರ್; 7 ಜನರ ದುರ್ಮರಣ ವಾಹನ ಸಂಪುರ್ಣ ನುಜ್ಜುಗುಜ್ಜು

ವೇಗವಾಗಿ ಬಂದ ಕ್ರೂಸರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಬಳ್ಳಾರಿ ನಾಲಾಗೆ ಬಿದ್ದಿದೆ. ಕ್ರೂಸರ್ ನಲ್ಲಿದ್ದ 7 ಜನರು ಸಾವನ್ನಪ್ಪಿದ್ದಾರೆ. 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.
ಅಕ್ಕ-ತಂಗಿಯರ ಹಾಳದಿಂದ ಬೆಳಗಾವಿಗೆ ದಿನಗೂಲಿ ಕೆಲಸಕ್ಕೆಂದು ಕ್ರೂಸರ್ ನಲ್ಲಿ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.
ದಿನಗೂಲಿ ನೌಕರರು ರೈಲ್ವೆ ಬ್ರಿಡ್ಜ್ ಕಾಮಗಾರಿಗಾಗಿ ಕೆಲಸಕ್ಕೆ ಹೋಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ಬೆನ್ನಲ್ಲೇ ಗೋಕಾಕ್ ಹಾಗೂ ಬೆಳಗಾವಿ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಟ್ರಾಫಿಕ್ ಜಾಮ್ ಆಗಿದೆ
ಸ್ಥಳಕ್ಕೆ ಮಾರಿಹಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.