Karnataka News
ರಣಕುಂಡೆ: ಜಲಜೀವನ್ ಮಿಷನ್ ಕಾಮಗಾರಿಗೆ ಚಾಲನೆ

ರಣಕುಂಡೆ: ಜಲಜೀವನ್ ಮಿಷನ್ ಕಾಮಗಾರಿಗೆ ಚಾಲನೆ
ಬೆಳಗಾವಿ –
ಬೆಳಗಾವಿ ಗ್ರಾಮೀಣ ಕ್ಷೇತ್ರದ ರಣಕುಂಡೆ ಗ್ರಾಮಕ್ಕೆ ಕುಡಿಯುವ ನೀರನ್ನು ಪೂರೈಸುವ ಕಾಮಗಾರಿಗಳಿಗೆ ಸೋಮವಾರ ಸ್ಥಳೀಯ ಜನ ಪ್ರತಿನಿಧಿಗಳು, ಕಾಂಗ್ರೆಸ್ ಯುವ ಮುಖಂಡ ಮೃಣಾಲ ಹೆಬ್ಬಾಳಕರ್ ಸೇರಿ ಚಾಲನೆಯನ್ನು ನೀಡಿದರು.
ಜಲಜೀವನ್ ಮಿಷನ್ ಯೋಜನೆಯ ವತಿಯಿಂದ ಕುಡಿಯುವ ನೀರನ್ನು ಪೂರೈಸುವ ಕಾಮಗಾರಿಗೆ 50 ಲಕ್ಷ ರೂ, ಮಂಜೂರಾಗಿದೆ. ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಕ್ಷೇತ್ರದ ಹಲವು ಗ್ರಾಮಗಳಿಗೆ ಜಲಜೀವನ್ ಮಿಷನ್ ಯೋಜನೆ ಮಂಜೂರಾಗಿದೆ. ಜನರ ನೀರಿನ ಬವಣೆ ದೂರವಾಗುತ್ತಿದೆ ಎಂದು ಮೃಣಾಲ ಹೆಬ್ಬಾಳಕರ್ ಈ ಸಂದರ್ಭದಲ್ಲಿ ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಗ್ರಾಮಸ್ಥರು, ಗುತ್ತಿಗೆದಾರರು ಉಪಸ್ಥಿತರಿದ್ದರು.