Karnataka News
BIG NEWS : ಬೆಳಗಾವಿ ಎಸ್ಪಿ ಲಕ್ಷ್ಮಣ ನಿಂಬರಗಿ ಸೇರಿ 16 ಐಪಿಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ

ಬೆಂಗಳೂರು: 16 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿದ್ದ ಸಂಜೀವ್ ಎಂ.ಪಾಟೀಲ್ ಅವರನ್ನು ಬೆಳಗಾವಿ ಎಸ್ ಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಲಕ್ಷ್ಮಣ ನಿಂಬರಗಿಯವರನ್ನು ಬೆಂಗಳೂರು ನಗರ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.
ಬೆಂಗಳೂರು ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿದ್ದ ಜೋಶಿ ಶ್ರೀನಾಥ್ ಮಹಾದೇವ್ ಅವರನ್ನು ಕರ್ನಾಟಕ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಕೆ.ಎಂ.ಶಾಂತರಾಜು ಅವರನ್ನು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ಅಧೀಕ್ಷಕರಾಗಿ ವರ್ಗಾವಣೆ ಮಾಡಲಾಗಿದೆ.
ಕಲಾ ಕೃಷ್ಣ ಸ್ವಾಮಿಯವರನ್ನು ಬೆಂಗಳೂರು ಪೂರ್ವ ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತರನ್ನಾಗಿ, ಹರೀಶ್ ಪಾಂಡೆಯವರನ್ನು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಅಧೀಕ್ಷಕರನ್ನಾಗಿ ವರ್ಗಾವಣೆ ಮಾಡಲಾಗಿದೆ.