ಗ್ರಾಮೀಣ ಭಾಗದ ಮೂಲಸೌಕರ್ಯಕ್ಕೆ ಆದ್ಯತೆ : ಲಕ್ಷ್ಮೀ ಹೆಬ್ಬಾಳ್ಕರ್
96 ಲಕ್ಷ ರೂ. ವೆಚ್ಚದಲ್ಲಿ ಬಡಾಲ ಅಂಕಲಗಿ, ಹುಲಿಕವಿ ರಸ್ತೆೆಗಳ ಅಭಿವೃದ್ಧಿ

ಬೆಳಗಾವಿ – ಮೂಲ ಸೌಕರ್ಯವಿಲ್ಲದಿದ್ದರೆ ಹಳ್ಳಿಗಳ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳುತ್ತದೆ. ಹಾಗಾಗಿ ರಸ್ತೆ ಸೇರಿದಂತೆ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಬಡಾಲ ಅಂಕಲಗಿ ಹಾಗೂ ಹುಲಿಕವಿ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಪೂಜೆ ನೆರವೇರಿಸಿದ ಅವರು ಮಾತನಾಡಿದರು.
ಬಡಾಲ ಅಂಕಲಗಿ ಗ್ರಾಮದ ರಸ್ತೆಗಳ ಅಭಿವೃದ್ಧಿಗಾಗಿ 40 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣದ ಕಾಮಗಾರಿಗಳಿಗೆ ಸೋಮವಾರ ಹೆಬ್ಬಾಳಕರ್ ಭೂಮಿ ಪೂಜೆ ನೆರವೇರಿಸಿದರು. ಗ್ರಾಮಗಳೇ ದೇಶದ ಜೀವ ನಾಡಿ. ಗ್ರಾಮಗಳಲ್ಲಿ ಮೂಲ ಸೌಕರ್ಯ ಅಭಿವೃದ್ಧಿಯಾದರೆ ಕ್ಷೇತ್ರದ ಅಭಿವೃದ್ಧಿ ಸಾಧ್ಯ. ಹಾಗಾಗಿ ಹಳ್ಳಿಗಳಲ್ಲಿ ಸುಗಮ ಸಂಚಾರ ವ್ಯವಸ್ಥೆಗೆ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದ್ಧೇನೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಎಲ್ಲ ಗ್ರಾಮಗಳಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಯೇ ಗುರಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಶ್ರೀ ರಾಚಯ್ಯ ಅಜ್ಜನವರು, ಗ್ರಾಮ ಪಂಚಾಯತಿಯ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸರ್ವಸದಸ್ಯರು ಉಪಸ್ಥಿತರಿದ್ದರು.
ಹುಲಿಕವಿ ಗ್ರಾಮದ ರಸ್ತೆಗಳ ಅಭಿವೃದ್ಧಿಗಾಗಿ 56 ಲಕ್ಷ ರೂ. ವೆಚ್ಚದ ಕಾಂಕ್ರೀಟ್ ರಸ್ತೆಗಳ ನಿರ್ಮಾಣದ ಕಾಮಗಾರಿಗಳಿಗೂ ಶಾಸಕಿ ಲಕ್ಷ್ನೀ ಹೆಬ್ಬಾಳಕರ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಅಶೋಕ ಹಂಚಿನಮನಿ, ಶಾಂತವ್ವ ಹಂಚಿನಮನಿ, ಸಿದ್ದನಗೌಡ ಪಾಟೀಲ, ಮಲಗೌಡ ಪಾಟೀಲ, ಶಂಕರಗೌಡ ಪಾಟೀಲ, ಮಲ್ಲನಗೌಡ ಪಾಟೀಲ, ರಾಮನಗೌಡ ಪಾಟೀಲ, ಶಾಂತಯ್ಯ ಹಿರೇಮಠ, ನಿಂಗಪ್ಪ ಬಾಲಣ್ಣವರ, ನಾಗಪ್ಪ ಡಮ್ಮಣಗಿ, ಯಲ್ಲಪ್ಪ ಹಂಚಿನಮನಿ ಹಾಗೂ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.