Karnataka NewsPolitics
ಜಿಎಸ್‌ಟಿ ಸಭೆಯಲ್ಲಿ ಭಾಗವಹಿಸಲು ಚಂಡೀಗಢಕ್ಕೆ ತೆರಳಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಚಂಡೀಗಢ ದಲ್ಲಿ ಮಂಗಳವಾರದಿಂದ 2 ದಿನಗಳ ಕಾಲ ನಡೆಯಲಿರುವ ಜಿಎಸ್‌ಟಿ ಸಭೆ ಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಸಂಜೆಯೇ ಹೊಸದಿಲ್ಲಿಗೆ ತೆರಳಿದ್ದಾರೆ.
ರಾಜ್ಯಗಳಿಗೆ ಕೇಂದ್ರ ಸರಕಾರ ನೀಡುವ ಜಿಎಸ್‌ಟಿ ಪರಿಹಾರ ಈ ತಿಂಗಳಲ್ಲಿ ಮುಕ್ತಾಯವಾಗಲಿದ್ದು, ಈ ಬಗ್ಗೆ ಸಭೆಯಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಹೇಳಿದರು.
ರಾಜ್ಯಗಳಿಗೆ ಜಿಎಸ್‌ಟಿ ಪರಿಹಾರ ಅವಧಿ ವಿಸ್ತರಣೆ, ಕೆಲವು ಉತ್ಪನ್ನಗಳ ಸ್ಲ್ಯಾಬ್ ಬದಲಾವಣೆ ಸಹಿತ ಹಲವು ಪ್ರಸ್ತಾವಗಳ ಕುರಿತು ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆಯಿದೆ.