Crime News
ಸೋನಿಯಾ ಗಾಂಧಿ ಆಪ್ತ ಕಾರ್ಯದರ್ಶಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಹೊಸದಿಲ್ಲಿ,ಜೂ.27: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಆಪ್ತ ಕಾರ್ಯದರ್ಶಿ ಪಿ.ಪಿ.ಮಾಧವನ್ ವಿರುದ್ಧ ಅತ್ಯಾಚಾರ ಮತ್ತು ಜೀವ ಬೆದರಿಕೆ ಪ್ರಕರಣ ದಾಖಲಾಗಿದೆ. 26ರ ಹರೆಯದ ದಲಿತ ಮಹಿಳೆಯೋರ್ವರು ಉತ್ತಮ ನಗರ ಪೊಲೀಸ್ ಠಾಣೆಯಲ್ಲಿ ಮಾಧವನ್ ವಿರುದ್ಧ ದೂರು ಸಲ್ಲಿಸಿದ್ದಾರೆ.
ಅತ್ಯಾಚಾರ ಮತ್ತು ಜೀವ ಬೆದರಿಕೆ ಆರೋಪಗಳಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ ಎಂದು ಡಿಸಿಪಿ ಹರ್ಷವರ್ಧನ ತಿಳಿಸಿದರು.
ಡಿಸಿಪಿ ಆರೋಪಿಯ ಹೆಸರನ್ನು ಹೇಳಿಲ್ಲವಾದರೂ,ಮಾಧವನ್ ವಿರುದ್ಧ ಆರೋಪಗಳನ್ನು ಮಾಡಲಾಗಿದೆ ಎಂದು ದಿಲ್ಲಿ ಪೊಲೀಸ್‌ನ ಅಧಿಕಾರಿಗಳು ತಿಳಿಸಿದರು.
ಮದುವೆಯಾಗುವ ಮತ್ತು ಉದ್ಯೋಗವನ್ನು ಕೊಡಿಸುವ ಆಮಿಷವೊಡ್ಡಿ ಮಾಧವನ್ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾಗಿ ದೂರಿನಲ್ಲಿ ಹೇಳಲಾಗಿದೆ.
ಮಹಿಳೆಯ ಪತಿ ದಿಲ್ಲಿಯ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಹೋರ್ಡಿಂಗ್‌ಗಳನ್ನು ಅಳವಡಿಸುವ ಕೆಲಸದಲ್ಲಿದ್ದು,2020ರಲ್ಲಿ ನಿಧನರಾಗಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.