Karnataka News
ಇಂದು ಸಿಎಂ ಬೊಮ್ಮಾಯಿ `KPTCL’ನ 1385 ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಆದೇಶ ಪತ್ರ ಪ್ರದಾನ

ಬೆಂಗಳೂರು : ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಹಾಗೂ ನಾನಾ ಎಸ್ಕಾಂ ವ್ಯಾಪ್ತಿಯಲ್ಲಿ ಖಾಲಿಯಿದ್ದ ಸ್ಟೇಷನ್ ಪರಿಚಾರಕ ಹಾಗೂ ಜೂನಿಯರ್ ಪವರ್ ಮ್ಯಾನ್ ಹುದ್ದೆಗೆ ಆಯ್ಕೆಯಾದ 1385 ಅರ್ಹ ಅಭ್ಯರ್ಥಿಗಳಿಗೆ ಆದೇಶ ಪತ್ರ ವಿತರಣೆ ಮಾಡಲಿದ್ದಾರೆ.
ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಇಂಧನ ಸಚಿವ ವಿ. ಸುನಿಲ್ ಕುಮಾರ್ ಅರ್ಹ ಅಭ್ಯರ್ಥಿಗಳಿಗೆ ನೇಮಕ ಆದೇಶ ಹಸ್ತಾಂತರಿಸಲಿದ್ದಾರೆ.
ಕೆಪಿಟಿಸಿಎಲ್ ಹಾಗೂ ಎಸ್ಕಾಂ ವ್ಯಾಪ್ತಿಯಲ್ಲಿ ಖಾಲಿಯಿರುವ ಸ್ಟೇಷನ್ ಪರಿಚಾರಕ ಹಾಗೂ ಕಿರಿಯ ಪವರ್ ಮ್ಯಾನ್ ಹುದ್ದೆಗೆ ಅತ್ಯಂತ ಪಾರದರ್ಶಕವಾಗಿ ನೇಮಕ ಪ್ರಕ್ರಿಯೆ ನಡೆಸಲಾಗಿದೆ. ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶವಿಲ್ಲದಂತೆ ನೇಮಕ ಪ್ರಕ್ರಿಯೆ ನಡೆಸಲಾಗಿದೆ