Karnataka News
ಭ್ರೂಣ ಹತ್ಯೆ ಪ್ರಕರಣ: ಬೆಳಗಾವಿ ಆರೋಗ್ಯ ಇಲಾಖೆಯಲ್ಲಿ ಡಿಸಿ ನಿತೇಶ್ ಪಾಟೀಲ್ ಮೇಜರ್ ಸರ್ಜರಿ..!

ಬೆಳಗಾವಿ- ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಯಾಗಿರುವ ಡಾ.ಎ.ವಿ.ಕಿವಡಸಣ್ಣವರ ಅವರು ನಿರ್ವಹಿಸುತ್ತಿದ್ದ ಕೆಪಿಎಂಇ ಮತ್ತು ಪಿಸಿ-ಪಿಎನ್ ಡಿಟಿ ಕಾರ್ಯವನ್ನು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಿ.ಎನ್.ತುಕ್ಕಾರ ಅವರಿಗೆ ಹಂಚಿಕೆ ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಮೂಡಲಗಿಯಲ್ಲಿ ಹಳ್ಳದಲ್ಲಿ ಭ್ರೂಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಇವರ ಕಾರ್ಯವೈಖರಿ ಸಮರ್ಪಕವಾಗಿರುವುದಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಆರೋಗ್ಯ ಇಲಾಖೆಗೆ ವರದಿ ಸಲ್ಲಿಸಿದ್ದರು.
ಕೆಪಿಎಂಇ ಮತ್ತು ಪಿಸಿ-ಪಿಎನ್ ಡಿಟಿ ಕಾರ್ಯವನ್ನು ಡಾ.ಕಿವಡಸನ್ನವರ ಅವರು ಸಮರ್ಪಕವಾಗಿ ನಿರ್ವಹಿಸಿ ಕಾಲಕಾಲಕ್ಕೆ ಸ್ಕ್ಯಾನಿಂಗ್ ಸೆಂಟರ್ ಹಾಗೂ ಆಸ್ಪತ್ರೆಗಳಿಗೆ ಭೇಟಿ ನೀಡದಿರುವುದರಿಂದ ಮೂಡಲಗಿಯಂತಹ ಘಟನೆಗಳು ಸಂಭವಿಸಿರುವುದು ಕಂಡುಬಂದಿರುತ್ತದೆ ಎಂದು ಜಿಲ್ಲಾಧಿಕಾರಿ ವರದಿಯಲ್ಲಿ ತಿಳಿಸಿದ್ದರು.