Karnataka News
BIGG NEWS : ರಾಜ್ಯದ ಜನತೆಗೆ `ಪವರ್’ ಶಾಕ್ : ಇಂದಿನಿಂದ ವಿದ್ಯುತ್ ದರ ಏರಿಕೆ!

ಬೆಂಗಳೂರು : ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಇದೀಗ ಪವರ್ ಶಾಕ್ ಎದುರಾಗಿದ್ದು, ಇಂದಿನಿಂದ ಪ್ರತಿ ಯೂನಿಟ್ ವಿದ್ಯುತ್ ದರ 19-31 ಪೈಸೆ ಏರಿಕೆ ಮಾಡಲಾಗಿದೆ.
ಕಳೆದ ಎರಡು ವರ್ಷಗಳಿಂದ ಕಲ್ಲಿದ್ದಲು ದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುತ್ ನಿಯಂತ್ರಣ ಪ್ರಸ್ತಾವನೆ ಸಲ್ಲಿಸಿತ್ತು. ಎಸ್ಕಾಂಗಳ ಮನವಿ ಮೇರೆಗೆ ಇಂದಿನಿಂದ ವಿದ್ಯುತ್ ದರ ಪ್ರತಿ ಯೂನಿಟ್ ಗೆ 19 ರಿಂದ 31 ಪೈಸೆ ಏರಿಕೆ ಮಾಡಲಾಗಿದೆ.
ವಿದ್ಯುತ್ ದರ 19 ಪೈಸೆಯಿಂದ 31 ಪೈಸೆವರೆಗೆ ಹೆಚ್ಚಾಗಲಿದೆ. ಪ್ರತಿ ತಿಂಗಳು 100 ಯೂನಿಟ್ ಬಳಸುವ ಗ್ರಾಹಕರು, ಇನ್ಮುಂದೆ ಹೆಚ್ಚುವರಿಯಾಗಿ ಪ್ರತಿ ಯೂನಿಟ್ ಗೆ 19 ಪೈಸೆಯಿಂದ 31 ಪೈಸೆವರೆಗೆ ಪಾವತಿಸಬೇಕು. ಇದರಿಂದ ಜನರಿಗೆ ಮತ್ತಷ್ಟು ಬರೆ ಬೀಳಲಿದೆ.