ಸುವರ್ಣ ವಿಧಾನ ಸೌಧಕ್ಕೆ ಕಚೇರಿ ಸ್ಥಳಾಂತರವಾಗಬೇಕು ಎಂದು ಹೋರಾಟ ನಡೆಸುತ್ತಿದ್ದೇವೆ. : ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ

ಕಳೆದ ಹಲವಾರ ವರ್ಷಗಳಿಂದ ಬೆಳಗಾವಿ ಸುವರ್ಣ ವಿಧಾನ ಸೌಧಕ್ಕೆ ಬೆಂಗಳೂರಿನಲ್ಲಿರುವ ಕಚೇರಿ ಸ್ಥಳಾಂತರವಾಗಬೇಕೆಂದು ಗಡಿಭಾಗದ ಕನ್ನಡಿರು ಹೋರಾಟ ಮಾಡಿಕೊಂಡು ಬಂದಿದ್ದೇವೆ. ಇದರ ನಡುವೆ ಬಿಜೆಪಿ ರಾಜ್ಯ ವಕ್ತಾರ ಮಹೇಶ ಸೌಧಕ್ಕೆ ಕಚೇರಿ ಸ್ಥಳಾಂತರವಾದರೆ ಅಭಿವೃದ್ಧಿಯಾಗುತ್ತದೆ ಎಂಬುದು ತಪ್ಪು ಎಂಬ ಹೇಳಿಕೆಯನ್ನು ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಖಂಡಿಸಿದ್ದಾರೆ.
ಬೆಳಗಾವಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬೆಳಗಾವಿಯ ಸುವರ್u ಸೌಧಕ್ಕೆ ಸರಕಾರಿ ಕಚೇರಿಗಳು ಸ್ಥಳಾಂತರವಾದರೆ ಮಾತ್ರ ಅಭಿವೃದ್ಧಿಯಾಗುತ್ತದೆ ಎಂಬುದು ತಪ್ಪು ಎಂದು ಹೇಳಿರುವ ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಎಂ.ಜಿ.ಮಹೇಶ್ ಹೇಳಿಕೆ ಕುರಿತಂತೆ ಬೆಳಗಾವಿಯಲ್ಲಿ ತೀವೃ ಆಕ್ರೋಶ ವ್ಯಕ್ತವಾಗುತ್ತದೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷರಾದ ಅಶೋಕ ಚಂದರಗಿ, ಹಲವಾರು ವರ್ಷಗಳಿಂದ ಗಡಿ ಭಾಗ ಅಭಿವೃದ್ಧಿಯಾಗಬೇಕು.
ಸುವರ್ಣ ವಿಧಾನ ಸೌಧಕ್ಕೆ ಕಚೇರಿ ಸ್ಥಳಾಂತರವಾಗಬೇಕು ಎಂದು ಹೋರಾಟ ನಡೆಸುತ್ತಿದ್ದೇವೆ.