Karnataka News
BIGG NEWS : `KPTCL’ ಹುದ್ದೆಗಳ ಪರೀಕ್ಷೆ ವೇಳಾಪಟ್ಟಿ ಪ್ರಕಟ : ಇಲ್ಲಿದೆ ಮಾಹಿತಿ

ಬೆಂಗಳೂರು : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಮಾಹಿತಿ ನೀಡಿದ್ದು, ಕೆಪಿಟಿಸಿಎಲ್ ಹುದ್ದೆಗಳ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದೆ.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಕಿರಿಯ ಎಂಜಿನಿಯರ್, ಸಹಾಯಕ ಎಂಜಿನಿಯರ್ ಹುದ್ದೆಗಳ ಪರೀಕ್ಷಾ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿದ್ದು, ಜುಲೈ 23 ರಿಂದ ಆಗಸ್ಟ್ 7 ರವರೆಗೆ ವಿವಿಧ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ https:\kea.kar.nic.in ವೆಬ್ ಸೈಟ್ ಗೆ ಭೇಟಿ ನೀಡಬಹುದು ಎಂದು ಕೆಇಎ ಪ್ರಕಟಣೆ ತಿಳಿಸಿದೆ.