Politics
Breaking; ಮುಂಬೈಗೆ ಬಂದ ರೆಬಲ್ ಶಾಸಕರು, ಸಿಎಂ & ಡಿಸಿಎಂ ಜೊತೆ ಸಭೆ

ಮುಂಬೈ, ಜುಲೈ 03;ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರದ ಪತನಕ್ಕೆ ಕಾರಣರಾದ ರೆಬಲ್ ಶಾಸಕರು ಶನಿವಾರ ರಾತ್ರಿ ಮುಂಬೈಗೆ ಆಗಮಿಸಿದ್ದಾರೆ.
ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸರ್ಕಾರದ ವಿರುದ್ಧ ಬಂಡಾಯ ಎದ್ದು ಏಕನಾಥ್ ಶಿಂಧೆ ನಾಯಕತ್ವದಲ್ಲಿ ಮೊದಲು ಸೂರತ್‌ಗೆ ಶಾಸಕರು ತೆರಳಿದ್ದರು. ಬಳಿಕ ಅಸ್ಸಾಂನ ಗುವಾಹಟಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದರು.
ಬುಧವಾರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ್ದರು. ಗುರುವಾರ ಮಹಾರಾಷ್ಟ್ರದಲ್ಲಿ ಶಿವಸೇನೆ, ಬಿಜೆಪಿ ಮೈತ್ರಿಯ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಏಕನಾಥ್ ಶಿಂಧೆ ಮುಖ್ಯಮಂತ್ರಿಯಾಗಿ, ಬಿಜೆಪಿಯ ದೇವೇಂದ್ರ ಫಡ್ನವೀಸ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು.
ಅಸ್ಸಾಂನ ಗುವಾಹಟಿ ಹೋಟೆಲ್‌ನಲ್ಲಿದ್ದ ಶಾಸಕರು ಶನಿವಾರ ರಾತ್ರಿ ಮುಂಬೈಗೆ ವಾಪಸ್ ಆಗಿದ್ದಾರೆ. ಸೋಮವಾರ ಮುಖ್ಯಮಂತ್ರಿ ಏಕನಾಥ್ ಶಿಂಧೆ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತು ಮಾಡಬೇಕಿದೆ.