ಬೆಳಗಾವಿ ನಗರದ ರಾಣಿ ಚೆನ್ನಮ್ಮಾ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣದ ವತಿಯಿಂದ ಪ್ರತಿಭಟನೆ
ಬೇಜವಾಬ್ದಾರಿ ಹೇಳಿಕೆ ನೀಡಿರುವ ಬಿಜೆಪಿ ಮುಖ್ಯ ವಕ್ತಾರರಾದ ಎಂ.ಮಹೇಶ್ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕೆಂದು

ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ರಾಜ್ಯಮಟ್ಟದ ಕಚೇರಿಗಳನ್ನು ಸ್ಥಳಾಂತರ ಮಾಡುವ ಕುರಿತಂತೆ ಬೇಜವಾಬ್ದಾರಿ ಹೇಳಿಕೆ ನೀಡಿರುವ ಬಿಜೆಪಿ ಮುಖ್ಯ ವಕ್ತಾರರಾದ ಎಂ.ಮಹೇಶ್ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ವತಿಯಿಂದ ನಗರದ ರಾಣಿ ಚೆನ್ನಮ್ಮಾ ವೃತ್ತದಲ್ಲಿ ಪ್ರತಿಭಟನೆಯನ್ನು ನಡೆಸಿದರು.
ಬೆಳಗಾವಿ ನಗರದ ರಾಣಿ ಚೆನ್ನಮ್ಮಾ ವೃತ್ತದಲ್ಲಿ ಕರವೆ ನಾರಾಯಣ ಗೌಡ ಬಣದ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಚೆನ್ನಮ್ಮಾ ವೃತ್ತದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು ಬಿಜೆಪಿ ಮುಖ್ಯ ವಕ್ತಾರ ಎಂ.ಜಿ ಮಹೇಶ್ ಹೇಳಿಕೆಯನ್ನು ಖಂಡಿಸಿ ಅವರನ್ನು ಪಕ್ಷದಿಂದ ವಜಾ ಮಾಡಬೇಕೆಂದು ಆಗ್ರಹಿಸಿದರು. ಈ ವೇಳೆ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕಿದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಮಹಾದೇವ ತಳವಾರ್ ರವರು, ಬೆಳಗಾವಿಯ ಸುವರ್ಣ ವಿಧಾನಸೌಧ ಉತ್ತರ ಕರ್ನಾಟಕದ ಶಕ್ತಿ ಕೇಂದ್ರ, ಇದು ಉತ್ತರ ಕರ್ನಾಟಕದ ಅಭಿವೃದ್ಧಿಗೆ ದಿಕ್ಸೂಚಿ ಆಗಬೇಕೆನ್ನುವುದು ಉತ್ತರ ಕರ್ನಾಟಕದ ಜನತೆಯ ಆಶಯವಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ೨೪ ಗಂಟೆಯೊಳಗಾಗಿ ರಾಜ್ಯಮಟ್ಟದ ಕಚೇರಿಗಳನ್ನು ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಉತ್ತರ ಕರ್ನಾಟಕದ ಮಠಾಧೀಶರ ಎದುರು ಪ್ರಮಾಣ ಮಾಡಿದ್ದರು.
ಆದರೆ ಬಿಜೆಪಿ ವಕ್ತಾರ ಎಂ ಮಹೇಶ್ ಅವರು ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ. ಸುವರ್ಣ ವಿಧಾನಸೌಧಕ್ಕೆ ಕಚೇರಿಗಳನ್ನು ಸ್ಥಳಾಂತರ ಮಾಡಿದ್ರೆ ಈ ಭಾಗದ ಅಭಿವೃದ್ಧಿ ಆಗುತ್ತೆ ಎನ್ನುವದು ತಪ್ಪು ಎಂದು ಹೇಳಿಕೆ ನೀಡುವ ಮೂಲಕ ಉತ್ತರ ಕರ್ನಾಟಕದ ಜನತೆಯ ಆಶೋತ್ತರಗಳಿಗೆ ಅವಮಾನಿಸಿದ್ದಾರೆ. ಇಂತಹ ಬೇಜವಾಬ್ದಾರಿ ಹೇಳಿಕೆ ನೀಡಿರುವ ಬಿಜೆಪಿ ವಕ್ತಾರ ಎಂ ಮಹೇಶ್ ಅವರನ್ನು ಕೂಡಲೇ ಬಿಜೆಪಿಯಿಂದ ಉಚ್ಛಾಟಿಸಬೇಕು. ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ರಾಜ್ಯಮಟ್ಟದ ಕಚೇರಿಗಳನ್ನು ಸ್ಥಳಾಂತರ ಮಾಡುವ ನಿರ್ಧಾರ ಕೈಗೊಳ್ಳುವಂತೆ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕರವೆ ನಾರಾಯಣಗೌಡ ಬಣದ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.