Karnataka NewsPolitics
ಬೆಳಗಾವಿ : ಭಾರತೀಯ ಜನತಾ ಪಾರ್ಟಿ ಬೆಳಗಾವಿ ಮಹಾನಗರ ಜಿಲ್ಲಾ ಕಾರ್ಯಕಾರಣಿ ಸಭೆ

ಬೆಳಗಾವಿ : ಭಾರತೀಯ ಜನತಾ ಪಾರ್ಟಿ ಬೆಳಗಾವಿ ಮಹಾನಗರ ಜಿಲ್ಲಾ ಕಾರ್ಯಕಾರಣಿ ಸಭೆಯು ನಗರದ ರೆಡ್ಡಿ ಭವನದಲ್ಲಿ ಜರುಗಿತು.
ಈ ಕಾರ್ಯಕ್ರಮದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಸಾಧನೆಗಳ ಬಗ್ಗೆ ವಿಚಾರ ವಿನಿಮಯ, ಬೆಳಗಾವಿ ನಗರದಲ್ಲಿ ನಡೆಯತ್ತಿರುವ ಅಭಿವೃಧ್ದಿ ಕೆಲಸಗಳು, ಜನಸಾಮಾನ್ಯರಿಗೆ ತಲುಪುತ್ತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಅನುಷ್ಠಾನದ ಬಗ್ಗೆ ವಿಚಾರ ವಿನಿಮಯ ಮಾಡಿಕೊಳ್ಳಲಾಯಿತು.
ಸಭೆಯಲ್ಲಿ ಭಾರತೀಯ ಜನತಾ ಪಾರ್ಟಿ ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪ್ರಭಾರಿ, ಸಹಪ್ರಭಾರಿಗಳು, ಬೆಳಗಾವಿ ಮಹಾನಗರ ಜಿಲ್ಲಾ ಪದಾಧಿಕಾರಿಗಳು, ಬೆಳಗಾವಿ ಉತ್ತರ ಮಂಡಲ ಮತ್ತು ದಕ್ಷಿಣ ಮಂಡಲ ಪದಾಧಿಕಾರಿಗಳು, ಪ್ರಮುಖರು, ನಗರ ಸೇವಕರು ಹಾಗೂ ಕಾರ್ಯಕರ್ತರು ಸಭೆಯಲ್ಲಿ ಉಪಸ್ಥಿತರಿದ್ದರು.