Karnataka News
Yashaswini Yojana : ಅ.2 ರಿಂದ `ಯಶಸ್ವಿನಿ ಯೋಜನೆ’ ಮರು ಜಾರಿ

ಬೆಂಗಳೂರು : ರಾಜ್ಯದ ರೈತ ಸಮುದಾಯಕ್ಕೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಸಿಹಿಸುದ್ದಿ ನೀಡಿದ್ದು, ಅಕ್ಟೋಬರ್ 2 ರಿಂದ ಯಶಸ್ವಿನಿ ಯೋಜನೆ ಮರು ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಆಯೋಜಿಸಿದ್ದ 100 ನೇ ಅಂತರರಾಷ್ಟ್ರೀಯ ಸಹಕಾರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾಮೀಣ ಹಾಗೂ ನಗರ ಸಹಕಾರಿಗಳ ಆರೋಗ್ಯ ರಕ್ಷಣೆಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಅಕ್ಟೋಬರ್ 2 ರಿಂದ ಮರುಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಸಹಕಾರ ವಿಷಯದಲ್ಲಿ ಡಿಪ್ಲೋಮಾ ಪದವಿ ಪಡೆದವರಿಗೆ ಸಹಕಾರ ಕ್ಷೇತ್ರದ ಉದ್ಯೋಗಗಳಲ್ಲಿ ಮೀಸಲಾತಿ ಕಲ್ಪಿಸಲು ಅವಕಾಶ ನೀಡುವ ವಿಧೇಯಕವನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಹೇಳಿದ್ದಾರೆ.