Karnataka News
BIG NEWS: ಖಾನಾವಳಿಯಲ್ಲಿ ಸಿಲಿಂಡರ್ ಸ್ಫೋಟ; ಅಕ್ಕಪಕ್ಕದ 5 ಅಂಗಡಿಗಳು ಸುಟ್ಟು ಭಸ್ಮ

ಬಾಗಲಕೋಟೆ: ಖಾನವಳಿಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಅಕ್ಕಪಕ್ಕದ 5 ಅಂಗಡಿಗಳು ಸುಟ್ಟು ಭಸ್ಮವಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ನಡೆದಿದೆ.
ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸಂಪೂರ್ಣ ನಾಶವಾಗಿದ್ದು, ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ.
ಬೆಂಕಿಯ ಕೆನ್ನಾಲಿಗೆ, ದಟ್ಟ ಹೊಗೆ ಮುಗಿಲೆತ್ತರಕ್ಕೆ ಚಾಚಿದೆ.
ಪ್ರಸ್ತುತ ಬೆಂಕಿಯನ್ನು ತಹಬದಿಗೆ ತರಲಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.