Crime News
Trending
Crime News: ಮಂಡ್ಯ: ಜಿಲ್ಲೆಯಲ್ಲಿ ರಕ್ತಪಾತ ನಿಲ್ಲುವಂತೆ ಕಾಣುತ್ತಿಲ್ಲ. ನಡೆಯಿತು ಮತ್ತೊಂದು ಭೀಕರ ಕೊಲೆ!

ಸಾಲು ಸಾಲು ಕೊಲೆಗಳಿಗೆ ಸಾಕ್ಷಿಯಾದ ಮಂಡ್ಯ ಜಿಲ್ಲೆಯಲ್ಲಿ ಇದೀಗ ಮತ್ತೊಂದು ಕೊಲೆ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಕೊಲೆ ಮಾಡಿದ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಪಟ್ಟಣದಲ್ಲಿ ತಡರಾತ್ರಿ ನಡೆದಿದೆ.ಮಂಡ್ಯ: ಜಿಲ್ಲೆಯಲ್ಲಿ ರಕ್ತಪಾತ ನಿಲ್ಲುವಂತೆ ಕಾಣುತ್ತಿಲ್ಲ.
ಸಾಲು ಸಾಲು ಕೊಲೆಗಳಿಗೆ ಸಾಕ್ಷಿಯಾದ ಮಂಡ್ಯ ಜಿಲ್ಲೆಯಲ್ಲಿ ಇದೀಗ ಮತ್ತೊಂದು ಕೊಲೆ(Murder) ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಕೊಲೆ ಮಾಡಿದ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಪಟ್ಟಣದಲ್ಲಿ ತಡರಾತ್ರಿ ನಡೆದಿದೆ.
ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಸಂತೆ ಮೈದಾನದ ಅರಳಿ ಮರದ ಬಳಿ ನಿನ್ನೆ ತಡರಾತ್ರಿ ಬೆಳ್ಳೂರು ಪಟ್ಟಣದ ಅಂಬೇಡ್ಕರ್ ಕಾಲೋನಿ ನಿವಾಸಿ ಸುನೀಲ್ (36) ಎಂಬಾತನನ್ನು ಹಂತಕರು ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದ್ದರು. ತೀವ್ರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಸುನೀಲ್ನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ. ಘಟನೆಗೆ ಕಾರಣ ಏನು ಎಂದು ತಿಳಿದುಬಂದಿಲ್ಲ.