Karnataka News
ಬಸ್ ನಿಲ್ದಾಣದಲ್ಲಿಕೊಠಡಿಗೆ ನುಗ್ಗಿ ನಿಯಂತ್ರಣಾಧಿಕಾರಿ ಮೇಲೆ ಹಲ್ಲೆ

ಬೆಳಗಾವಿ: ಬಸ್ ನಿಲ್ದಾಣದ ನಿಯಂತ್ರಣಾಧಿಕಾರಿ ಕೊಠಡಿಗೆ ನುಗ್ಗಿದ ಪ್ರಯಾಣಿಕನೊಬ್ಬ ಬಸ್ ಸಂಚಾರ ನಿಯಂತ್ರಣಾಧಿಕಾರಿ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ನಡೆದಿದೆ.
ಬಸ್ ವಿಚಾರಣೆ ವಿಷಯಕ್ಕೆ ಸಂಬಂಧಿಸಿದಂತೆ ಅಧಿಕಾರಿ ಮತ್ತು ಪ್ರಯಾಣಿಕನ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಗಲಾಟೆ ವಿಕೋಪಕ್ಕೆ ತಿರುಗಿ ಅಧಿಕಾರಿ ಮತ್ತು ಪ್ರಯಾಣಿಕ ಒಬ್ಬರ ಮೇಲೊಬ್ಬರು ಹಲ್ಲೆ ಮಾಡಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಸಾರಿಗೆ ಇಲಾಖೆ ಸಿಬ್ಬಂದಿ ಪ್ರಯಾಣಿಕನಿಗೆ ಥಳಿಸಿ ಕೊಠಡಿಯಲ್ಲಿ ಕೂಡಿ ಹಾಕಿ ರಾಮದುರ್ಗ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.