Karnataka News
ಪೌರ ಕಾರ್ಮಿಕರ ಹೋರಾಟಕ್ಕೆ ಜಯ

ಬೆಂಗಳೂರು : ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಳೆದ ನಾಲ್ಕು ದಿನಗಳಿಂದ ಬಿಬಿಎಂಪಿ ಸೇರಿದಂತೆ ರಾಜ್ಯಾದ್ಯಂತ ನಡೆಯುತ್ತಿದ್ದ ಪೌರಕಾರ್ಮಿಕರು ಹಾಗೂ ಹೊರಗುತ್ತಿಗೆ ನೌಕರರ ಹೋರಾಟ ಇಂದು ಕೊನೆಗೊಂಡಿದ್ದು.
ರಾಜ್ಯ ಸರಕಾರ ಪೌರಕಾರ್ಮಿಕರ ನೇಮಕಾತಿಹಾಗೂ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಗುತ್ತಿಗೆ ಪದ್ದತಿ ರದ್ದುಪಡಿಸಿ ನೇರ ವೇತನ ಜಾರಿಗೊಳಿಸಲು ಒಪ್ಪಿದ್ದು ರಾಜ್ಯಾದ್ಯಂತ ನಾಳೆಯಿಂದ ಪೌರಕಾರ್ಮಿಕರು ಹಾಗೂ ಹೊರಗುತ್ತಿಗೆ ನೌಕರರು ಎಂದಿನಂತೆ ಸೇವೆಯಲ್ಲಿ ತೊಡಗಲಿದ್ದಾರೆ ಎಂದು ಕರ್ನಾಟಕ ರಾಜ್ಯ ನಗರಪಾಲಿಕೆ ನಗರಸಭೆ ಪುರಸಭೆ ಪಟ್ಟಣ ಪಂಚಾಯತಿ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಎಂ.ಬಿ.ನಾಗಣ್ಣಗೌಡ ತಿಳಿಸಿದ್ದಾರೆ.