ಮಹಾರಾಷ್ಟ್ರದಲ್ಲಿ ಭಾರಿ ಮಳೆ ಚಿಕ್ಕೋಡಿ ತಾಲೂಕಿನ ನದಿಗಳಿಗೆ ಪ್ರವಾಹದ ಭೀತಿ

ನೆರೆಯ ಮಹಾರಾಷ್ಟ್ರದ ಕೊಲ್ಲಾಪುರದ, ಸಾತಾರಾ, ಕೊಯ್ನಾ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವು ಬ್ಯಾರೇಜಗಳು ಜಲಾವೃತ ಆಗಿವೆ. ಹೀಗಾಗಿ ಚಿಕ್ಕೋಡಿ ತಾಲೂಕಿನ ನದಿಗಳ ನೀರಿನ ಮಟ್ಟ ಹೆಚ್ಚಾಗುತ್ತಿದ್ದು,ಪ್ರವಾಹದ ಭೀತಿ ಎದುರಾಗಿದೆ…
ಕಳೆದ 24 ಗಂಟೆಗಳಿಂದ ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕೊಲ್ಲಾಪುರ ಜಿಲ್ಲೆಯ ಪಂಚಗಂಗಾ ನದಿಯ ನೀರಿನ ಮಟ್ಟ ಒಂದೇ ರಾತ್ರಿಯಲ್ಲಿ 7 ಅಡಿಗಳಷ್ಟು ಏರಿಕೆಯಾಗಿದೆ. ಕೊಲ್ಲಾಪುರ ಜಿಲ್ಲೆಯ ರಾಜಾರಾಮ ಬ್ಯಾರೇಜ ಸೇರಿದಂತೆ ಒಟ್ಟು 14 ಬ್ಯಾರೇಜಗಳು ಜಲಾವೃತವಾಗಿವೆ.
ಮತ್ತೊಂದೆಡೆ ಕೊಯ್ನಾ ಅಣೆಕಟ್ಟು ಪ್ರದೇಶದಲ್ಲೂ ಭಾರಿ ಮಳೆಯಾಗುತ್ತಿದೆ.
ಕೊಯ್ನಾ ಡ್ಯಾಂನಲ್ಲಿ ಕಳೆದ 24 ಗಂಟೆಗಳಲ್ಲಿ 2 ಟಿಎಂಸಿ ನೀರು ಸಂಗ್ರಹವಾಗಿದೆ. ಕೊಂಕಣದ ಎಲ್ಲಾ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ..
ಮಹಾರಾಷ್ಟ್ರ ರಾಜ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಚಿಕ್ಕೋಡಿ ತಾಲೂಕಿನ ಕೃಷ್ಣಾ, ದೂಧಗಂಗಾ, ವೇದಗಂಗಾ ನದಿಗಳ ನೀರಿನ ಮಟ್ಟ ಕ್ಷಣಕ್ಷಣಕ್ಕೂ ಏರಿಕೆಯಾಗುತ್ತಿದೆ..ಹೀಗೆ ಮಳೆ ಮುಂದುವರಿದರೆ ಚಿಕ್ಕೋಡಿ ತಾಲೂಕಿನಲ್ಲಿ ಪ್ರವಾಹದ ಪರಿಸ್ಥಿತಿ ಎದುರಾಗಲಿದೆ..
ಸದ್ಯ ಚಿಕ್ಕೋಡಿ ಉಪವಿಭಾಗದ ಅಧಿಕಾರಿಗಳು ಮಹಾರಾಷ್ಟ್ರ ರಾಜ್ಯದ ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅಲ್ಲಿನ ಪರಿಸ್ಥಿತಿಯ ಮೇಲೆ ನಿಗಾ ಇಟ್ಟಿದಾರೆ..
ಒಟ್ಟಿನಲ್ಲಿ ಮಹಾರಾಷ್ಟ್ರದಲ್ಲಿ ಭಾರಿ ಮಳೆಯಿಂದಾಗಿ ಇತ್ತ ಚಿಕ್ಕೋಡಿ ತಾಲೂಕಿನ ನದಿಗಳು ಉಕ್ಕಿ ಹರಿಯುತ್ತಿದ್ದು,ನದಿ ತೀರದ ಜನರಲ್ಲಿ ಪ್ರವಾಹದ ಭೀತಿ ಎದುರಾಗಿದೆ..