
ಬೆಳಗಾವಿಯಲ್ಲಿ ಕಳೆದ ಎರಡು ದಿನಗಳಿಂದ ಬಿಟ್ಟು ಬಿಡದೇ ಮಳೆ ಸುರಿಯುತ್ತಿದ್ದು. ವರುಣರಾಯನ ಅಬ್ಬರ ಮುಂದುವರಿದಿದೆ.ಹೌದು ಬೆಳಗಾವಿ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಬೆಳಗ್ಗೆಯಿಂದಲೇ ವರುಣನ ಅಬ್ಬರ ಜೋರಾಗಿದೆ.
ಹೌದು ಬೆಳಗಾವಿ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಬೆಳಗ್ಗೆಯಿಂದಲೇ ವರುಣನ ಅಬ್ಬರ ಜೋರಾಗಿದೆ. ನಿರಂತರ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದ್ದು, ವಾಹನ ಸವಾರರು, ಶಾಲಾ, ಕಾಲೇಜು ವಿದ್ಯಾರ್ಥಿಗಳ ತೀವ್ರ ಪರದಾಡುತ್ತಿರುವ ದೃಶ್ಯ ಕಂಡು ಬಂದಿದೆ.
ನಿರಂತರವಾಗಿ ಮಳೆ ಆಗುತ್ತಿರೋದರಿಂದ ಕೃಷಿ ಚಟುವಟಿಕೆಗಳಿಗೂ ಸಾಕಷ್ಟು ತೊಂದರೆ ಆಗಿದೆ. ಇನ್ನು ಬೆಳಗಾವಿ ಜಿಲ್ಲೆಯಲ್ಲಿ ಹರಿಯುವ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.