Crime NewsKarnataka News
Trending
ಸರ್ಕಾರಿ ಶಾಲೆಯ ಶಿಕ್ಷಕನ ಕಾಮ ಪುರಾಣ: ರಾಸಲೀಲೆ – ವಿಡಿಯೋಗಳನ್ನು ಮಾಡಿದ್ದು ನಾನೇ; ತಪ್ಪೊಪ್ಪಿಕೊಂಡ ಕಾಮುಕ ಶಿಕ್ಷಕ

ಬಂಧಿತನಾಗಿರುವ ಕೊಪ್ಪಳ ಜಿಲ್ಲೆಯ ಕಾರಟಗಿಯ (Karatagi, koppala) ಕಾಮುಕ ಶಿಕ್ಷಕ (Teacher) ಮಹಮ್ಮದ್ ಅಜರುದ್ದೀನ್ ಅಧಿಕಾರಿಗಳ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ವಿಡಿಯೋ ವೈರಲ್ (Viral Video) ಬೆನ್ನಲ್ಲೇ ಶಿಕ್ಷಕ ಮೊಬೈಲ್ ಸ್ವಿಚ್ಛ್ ಆಫ್ ಮಾಡಿಕೊಂಡು ಗೋವಾದಲ್ಲಿ ತಲೆಮರೆಸಿಕೊಂಡಿದ್ದನು.
ಸದ್ಯ ಆರೋಪಿ ಶಿಕ್ಷಕ ನ್ಯಾಯಾಂಗ ಬಂಧನದಲ್ಲಿದ್ದಾನೆ (Judicial Cutody). ಗೊರೇಬಾಳ ವಲಯ ಶಿಕ್ಷಣ ಸಂಯೋಜಕರ ವಿಚಾರಣೆಯ ವೇಳೆ ಶಿಕ್ಷಕ ಮಹಮ್ಮದ್ ಅಜರುದ್ದೀನ್ ತಪ್ಪೊಪ್ಪಿಕೊಂಡಿದ್ದಾನೆ. ಮೂರು ವರ್ಷದ ಹಿಂದೆ ನನ್ನ ಮನೆಯಲ್ಲಿ ಮಹಿಳೆಯೊಂದಿಗಿನ ವಿಡಿಯೋ ಮತ್ತು ಪಕ್ಕದ್ಮನೆ ವಿವಾಹಿತೆ ಜೊತೆಗಿನ ವಿಡಿಯೋ ಮಾಡಿಕೊಂಡಿದ್ದೆ ಎಂದು ಹೇಳಿದ್ದಾನೆ.
ಈ ವಿಡಿಯೋ ಮಾಡಿದ್ದು ತಪ್ಪಾಗಿದೆ. ನನ್ನ ಮೊಬೈಲ್ 15 ದಿನಗಳ ಹಿಂದೆ ಕಳ್ಳತನವಾಗಿದೆ. ಈ ಮೊಬೈಲ್ ನಲ್ಲಿದ್ದ ಖಾಸಗಿ ವಿಡಿಯೋಗಳನ್ನು ವೈರಲ್ ಮಾಡಿದ್ದಾರೆ. ಈ ವಿಡಿಯೋಗಳನ್ನಿಟ್ಟುಕೊಂಡು ನನ್ನ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಶಿಕ್ಷಕ ಮಹಮ್ಮದ್ ಅಜರುದ್ದೀನ್ ಆರೋಪ ಮಾಡಿದ್ದಾನೆ.
ಮಹ್ಮಮದ್ ಅಜರುದ್ದಿನ್ ಜು 3 ರಂದು ಕಾರಟಗಿ ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.