Karnataka News
ಸವದತ್ತಿ ಯಲ್ಲಮ್ಮನ ದೇವಿಗೆ ಹರಿದು ಬಂದ ದೇಣಿಗೆ : ದೇವಸ್ಥಾನಕ್ಕೆ ಭಕ್ತರ ಸಂಖ್ಯೆ ಹೆಚ್ಚಳವಾದ ಪರಿಣಾಮ 2.15 ಕೋಟಿ ದೇಣಿಗೆ ಸಂಗ್ರಹ

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಉಗರಗೋಳದಲ್ಲಿರುವ ಯಲ್ಲಮ್ಮನ ಗುಡ್ಡಕ್ಕೆ ಭಕ್ತರ ದಂಡೇ ಹರಿದುಬರುತ್ತಿದ್ದು, ಮೂರು ತಿಂಗಳಲ್ಲಿ 2.15 ಕೋಟಿ ರೂಪಾಯಿ ದೇಣಿಗೆ ಸಂಗ್ರಹವಾಗಿದೆ.
ದಿನೇ ದಿನೇ ರೇಣುಕಾದೇವಿ ದೇವಸ್ಥಾನಕ್ಕೆ ಭಕ್ತರ ಸಂಖ್ಯೆ ಹೆಚ್ಚಳವಾದ ಪರಿಣಾಮ 2.15 ಕೋಟಿ ದೇಣಿಗೆ ಸಂಗ್ರಹವಾಗಿದೆ.
ಸೋಮವಾರ ಎರಡನೇ ಹಂತದ ಹುಂಡಿ ಎಣಿಕೆ ನಡೆದಿದ್ದು, 33.44 ಲಕ್ಷ ನಗದು, 5.11 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 62,390 ಮೌಲ್ಯದ ಬೆಳ್ಳಿ ಸಂಗ್ರಹವಾಗಿದೆ.
ಇಲ್ಲಿ ಭಕ್ತರು ಇಷ್ಟಾರ್ಥ ಈಡೇರಿಕೆಗೆ ಬೇರೆ-ಬೇರೆ ದೇಶಗಳ ಕರೆನ್ಸಿ ನೋಟುಗಳು ಕೂಡ ಪತ್ತೆಯಾಗಿದ್ದವು. ವಿದೇಶಿ ಪ್ರವಾಸಿಗರ ಸಂಖ್ಯೆ ಕೂಡ ದೇವಸ್ಥಾನಕ್ಕೆ ಭೇಟಿ ನೀಡಿರುವುದು ಗಮನಾರ್ಹ ಸಂಗತಿಯಾಗಿದೆ.