Politics
BIGG NEWS : ಶಾಸಕ ಜಮೀರ್ ಅಹ್ಮದ್ ಖಾನ್ ಮನೆ `ACB’ ದಾಳಿ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದೇನು?

ಶಿವಮೊಗ್ಗ : ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಮನೆ ಮೇಲೆ ಎಸಿಬಿ ದಾಳಿ ಪ್ರಕರಣ ಕುರಿತಂತೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮೀರ್ ಅಹ್ಮದ್ ಖಾನ್ ಅವರು ಬಹಳ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಮೇಲೆ ಎಸಿಬಿ ದಾಳಿ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಜಮೀರ್ ಅಹ್ಮದ್ ಖಾನ್ ಮೇಲೆ ದಾಳಿ ಅನಗತ್ಯ ದಾಳಿ, ರಾಜಕೀಯ ಪ್ರೇರಿತ ದಾಳಿ ಎಂದು ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಹೀಗಾಗಿ ಅವರು ಎಸಿಬಿ ಕ್ಷಮೆ ಕೇಳಬೇಕು.ಕ್ಷಮೆ ಕೇಳದಿದ್ದರೆ ಸಿದ್ದರಾಮಯ್ಯ ವಿಪಕ್ಷ ಸ್ಥಾನವನ್ನೂ ಕಳೆದುಕೊಳ್ಳಲಿದ್ದಾರೆ ಎಂದರು.