Karnataka News
ಚಂದ್ರಶೇಖರ ಗುರೂಜಿ ಅಂತ್ಯಕ್ರಿಯಗೆ ಬಂದ ನಿಡಸೋಸಿ ಶ್ರೀ ಕಾರು ಅಪಘಾತ

ಧಾರವಾಡ : ಡಾ|ಚಂದ್ರಶೇಖರ ಗುರೂಜಿಯ ಅಂತ್ಯಕ್ರಿಯೆ ಮುಗಿಸಿಕೊಂಡು ಶ್ರೀಮಠದತ್ತ ಹೊರಟಿದ್ದ ನಿಡಸೋಸಿಯ ಸಿದ್ದಸಂಸ್ಥಾನ ಮಠದ ಪಂಚಮ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಅವರ ವಾಹನ ಅಪಘಾತವಾಗಿದ್ದು, ಸ್ವಾಮೀಜಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹುಬ್ಬಳ್ಳಿಯಲ್ಲಿ ಹತ್ಯೆಯಾದ ಡಾ|ಚಂದ್ರಶೇಖರ ಗುರೂಜಿ ಅವರ ಅಂತ್ಯಕ್ರಿಯೆಯಲ್ಲಿ ಶ್ರೀಗಳು ಪಾಲ್ಗೊಂಡು, ಮರಳಿ ಬೆಳಗಾವಿಯತ್ತ ಹೋಗುವಾಗ ಧಾರವಾಡ ತಾಲೂಕಿನ ಹಳೇ ತೇಗೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅವಘಡ ಸಂಭವಿಸಿದೆ.
ಶ್ರೀಗಳಿದ್ದ ವಾಹನವು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಘಟನೆಯಲ್ಲಿ ಶ್ರೀಗಳು ಸೇರಿದಂತೆ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾರಿಗೂ ಪ್ರಾಣಾಪಾಯ ಆಗಿಲ್ಲ. ಸದ್ಯ ಶ್ರೀಗಳನ್ನು ಚಿಕಿತ್ಸೆಗಾಗಿ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.