Karnataka News
ದೂರು ನೀಡಿದ್ದರು ಕ್ರಮ ಕೈಗೊಳ್ಳದ ಇನ್ಸ್‌ಪೆಕ್ಟರ್ ಅಮಾನತು ಮಾಡಿದ ಡಿಸಿಪಿ ಲಕ್ಷ್ಮಣ ನಿಂಬರಗಿ

ಬೆಂಗಳೂರು: ರೌಡಿಶೀಟರ್ನಿಂದ ತೊಂದರೆಯಾಗುತ್ತಿರುವ ಬಗ್ಗೆ ಪೊಲೀಸ್ ಠಾಣೆಗೆ ವ್ಯಕ್ತಿ ದೂರು ನೀಡಿದ್ದರೂ ಕ್ರಮಕೈಗೊಳ್ಳದ ಇನ್ಸ್‌ಪೆಕ್ಟರ್ ಅಮಾನತು ಮಾಡಲಾಗಿದೆ.
ನಗರದ ಕಲಾಸಿಪಾಳ್ಯ ಠಾಣೆ ಪಿಐ ಚೇತನ್ ಅಮಾನತುಗೊಳಿಸಿ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ ನಿಂಬರಗಿ ಆದೇಶ ಹೊರಡಿಸಿದ್ದಾರೆ.
ರೌಡಿಶೀಟರ್ನಿಂದ ತೊಂದರೆಯಾಗುತ್ತಿರುವ ಬಗ್ಗೆ ಪೊಲೀಸ್ ಠಾಣೆಗೆ ವ್ಯಕ್ತಿ ದೂರು ನೀಡಿದ್ದರೂ ಕ್ರಮಕೈಗೊಂಡಿರಲಿಲ್ಲ ಹೀಗಾಗಿ ಕರ್ತವ್ಯಲೋಪ ಹಿನ್ನೆಲೆಯಲ್ಲಿ ಇನ್ಸ್ಪೆಕ್ಟರ್ ಚೇತನ್ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಇತ್ತೀಚೆಗೆ ವರ್ಗಾವಣೆಯಾದ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರಗಿ ಆದೇಶ ಹೊರಡಿಸಿದ್ದಾರೆ.