BREAKING NEWS: Bakrid Festival ರಾಜ್ಯ ಸರ್ಕಾರದಿಂದ ‘ಬಕ್ರಿದ್ ಹಬ್ಬ’ ಆಚರಣೆಗೆ ಮಾರ್ಗಸೂಚಿ ಪ್ರಕಟ: ಈ ನಿಯಮ ಪಾಲನೆ ಕಡ್ಡಾಯ

ಬೆಂಗಳೂರು: ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದಂತ ಬಕ್ರಿದ್ ಹಬ್ಬದ ( Bakrid 2022 ) ಆಚರಣೆಗಾಗಿ ರಾಜ್ಯ ಸರ್ಕಾರದಿಂದ ( Karnataka Government ) ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಕೋವಿಡ್ ಸಂಖ್ಯೆಯ ( Covid19 Case ) ಏರಿಕೆಯ ನಡುವೆಯೂ ಬಕ್ರೀದ್ ಹಬ್ಬವನ್ನು ಕೆಲ ನಿಯಮಗಳನ್ನು ಪಾಲಿಸಿಕೊಂಡು ಆಚರಿಸುವಂತೆ ಸೂಚಿಸಲಾಗಿದೆ.
ಈ ಸಂಬಂಧ ಅಲ್ಪಸಂಖ್ಯಾತ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಮುಸ್ಲಿಂ ಬಾಂಧವರ ಎರಡನೇ ಪ್ರಮುಖ ಹಬ್ಬವಾದ ಬಕ್ರೀದ್ ( ಈದ್ – ಉಲ್-ಆಝ್ ಹಾ ) ಹಬ್ಬವನ್ನು ಜುಲೈ.10, 2022ರ ರವಿವಾರದಂದು ರಾಜ್ಯಾಧ್ಯಂತ ಆಚರಿಸಲಾಗುವುದೆಂದು ರಾಜ್ಯ ಚಂದ್ರದರ್ಶನ ಸಮಿತಿ ಘೋಷಿಸಿರುತ್ತದೆ ಎಂದಿದ್ದಾರೆ.
ರಾಜ್ಯಾದ್ಯಂತ ಪವಿತ್ರ ಬಕ್ರೀದ್ ಹಬ್ಬವನ್ನು ( eid ul adha 2022 ) ಶಾಂತಿ, ಸುವ್ಯವಸ್ಥೆ ಮತ್ತು ಸಾಮರಸ್ಯದೊಂದಿಗೆ ಆಚರಣೆ ಮಾಡಬೇಕಾಗಿರುವುದರಿಂದ, ಈ ಕೆಳಕಂಡ ಮಾರ್ಗಸೂಚಿ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದ್ದಾರೆ.
ಬಕ್ರೀದ್ ಹಬ್ಬದ ಆಚರಣೆಯ ಮಾರ್ಗಸೂಚಿ ಕ್ರಮಗಳು
- ಹಬ್ಬದ ದಿನದ ಸಾಮೂಹಿಕ ಪ್ರಾರ್ಥನೆಯಲ್ಲಿ ಕೋವಿಡ್-19 ನಿಯಂತ್ರಣ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವುದು
- ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಾರ್ವತ್ರಿಕ ಅಧಿನಿಯ 2020ರ ನಿಯಮಗಳು ಉಲ್ಲಂಘನೆಯಾಗದಂತೆ ಖುರ್ಬಾನಿಯನ್ನು ನೆರವೇರಿಸುವುದು
- ಖುರ್ಬಾನಿಯನ್ನು ಸಾರ್ವಜನಿಕ ಪ್ರದೇಶ, ರಸ್ತೆಗಳು, ಶಾಲಾ-ಕಾಲೇಜು, ಆಸ್ಪತ್ರೆ ಆವರಣ, ಉದ್ಯಾನವನ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿಸಿದೆ.
- ಜಿಲ್ಲಾಡಳಿತ, ಸ್ಥಳೀಯ ಆಡಳಿತ ಸಂಸ್ಥೆಗಳಿಂದ ನಿಗದಿಪಡಿಸಲಾದ ಸ್ಥಳಗಳಲ್ಲಿ ಮಾತ್ರ ಖುರ್ಬಾನಿಯನ್ನು ನೆರವೇರಿಸತಕ್ಕದ್ದು.
- ಖುರ್ಬಾನಿಯನ್ನು ನೆರವೇರಿಸುವಾಗ ಶುಚಿತ್ವ ಮತ್ತು ನೈರ್ಮಲ್ಯವನ್ನು ಕಡ್ಡಾಯವಾಗಿ ಕಾಪಾಡಿಕೊಳ್ಳುವುದು.
- ಪ್ರಾಣಿ ತ್ಯಾಜ್ಯವನ್ನು ಪರಿಣಾಮಕಾರಿಯಾಗಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವುದು
- ಸಾಮಾನ್ಯ ಹಾಗೂ ಸ್ಥಳೀಯವಾಗಿ ನೀಡುವ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು.
- ಬಕ್ರೀದ್ ಹಬ್ಬದ ಆಚರಣೆ ಕುರಿತು ರಾಜ್ಯ ಸರ್ಕಾರ, ಜಿಲ್ಲಾಡಳಿತ ಹೊರಡಿಸುವ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸುವಂತೆ ಸೂಚಿಸಿದ್ದಾರೆ.