Rain in Karnataka : ರಾಜ್ಯಾದ್ಯಂತ ಮುಂದುವರೆದ ವರುಣಾರ್ಭಟ : ಇಂದೂ ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು : ರಾಜ್ಯಾಧ್ಯಂತ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದೆ ( Heavy Rain ). ಹಲವು ಜಿಲ್ಲೆಗಳಲ್ಲಿ ಎಡೆಬಿಡದೇ ಸುರಿಯುತ್ತಿರುವಂತ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ.
ಮನೆಯಿಂದ ಹೊರ ಬರಲಾಗದಂತ ಸ್ಥಿತಿಯನ್ನು ಜನರು ಎದುರಿಸುತ್ತಿದ್ದಾರೆ. ಇದೇ ಕಾರಣದಿಂದಾಗಿ ರಾಜ್ಯದ ವಿವಿಧ ಜಿಲ್ಲೆಗಳ ಶಾಲಾ- ಕಾಲೇಜುಗಳಿಗೆ ಇಂದೂ ರಜೆಯನ್ನು ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಭಾರೀ ಮಳೆಯ ಕಾರಣದಿಂದ ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ
ಜಿಲ್ಲೆಯಲ್ಲಿ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ( Heavy Rain ) ಈಗಾಗಲೇ ರಜೆಯನ್ನು ಎರಡು ದಿನಗಳಿಂದ ಘೋಷಿಸಲಾಗಿತ್ತು. ಇದೀಗ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯ ಕಾರಣ, ದಿನಾಂಕ 08-07-2022ರ ಹಾಗೂ ದಿನಾಂಕ 09-07-2022ರ ನಾಡಿದ್ದು ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲೆ
ಉತ್ತರ ಕನ್ನಡ ಜಿಲ್ಲೆಯಲ್ಲಿಯಲ್ಲಿಯೂ ( Uttara Kannada District ) ಮಳೆರಾಯ ಆರ್ಭಟಿಸುತ್ತಿರೋ ಕಾರಣ, ಇಂದು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿದ್ದಾರೆ.
ಉಡುಪಿ ಜಿಲ್ಲೆ
ಉಡುಪಿ ಜಿಲ್ಲೆಯಲ್ಲಿಯೂ ಮಳೆಯ ಆರ್ಭಟಕ್ಕೆ ಜನತೆ ತತ್ತರಿಸಿ ಹೋಗಿದ್ದಾರೆ. ಈ ಕಾರಣದಿಂದಾಗಿಯೇ ಜಿಲ್ಲೆಯಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕೊಡಗು ಜಿಲ್ಲೆ
ಕೊಡಗು ( Kodagu District ) ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ್ ಆದೇಶಿಸಿದ್ದು, ಕೊಡಗು ಜಿಲ್ಲೆಯಾಧ್ಯಂತ ಭಾರೀ ಮಳೆಯಾಗುತ್ತಿದೆ. ಜಿಲ್ಲೆಯಲ್ಲಿ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಇಂದು ರೆಡ್ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಣೆ ಮಾಡಿದೆ ಎಂದು ಹೇಳಿದ್ದಾರೆ.
ಶಿವಮೊಗ್ಗ ಜಿಲ್ಲೆ
ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವಂತ ಭಾರಿ ಮಳೆಯಿಂದಾಗಿ ಜನರು ಜಿಲ್ಲೆಯ ಅನೇಕ ತಾಲೂಕುಗಳಲ್ಲಿ ಮನೆಯಿಂದ ಹೊರ ಬರದಂತ ಪರಿಸ್ಥಿತಿ ಇದೆ. ಈ ಹಿನ್ನಲೆಯಲ್ಲಿಯೇ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಸಾಗರ ಹಾಗೂ ಹೊಸನಗರ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.