BIGG NEWS : ರಾಜ್ಯಾದ್ಯಂತ ಮಳೆಯ ಅಬ್ಬರ : ಇಂದು ಅಧಿಕಾರಿಗಳ ಜೊತೆಗೆ ಸಿಎಂ ಬೊಮ್ಮಾಯಿ ಸಭೆ

ಬೆಂಗಳೂರು : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಇಂದೂ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಎಲ್ಲಾ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಇಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಕಲಬುರಗಿ, ಬೀದರ್, ವಿಜಯಪುರ, ಯಾದಗರಿ ಮತ್ತು ಬೆಳಗಾವಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಹಾಸನ, ಚಿಕ್ಕಮಗಳುರು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ.
ಅಧಿಕಾರಿಗಳ ಜೊತೆಗೆ ಇಂದು ಸಿಎಂ ಬೊಮ್ಮಾಯಿ ಸಭೆ
ಇನ್ನು ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಅನಾಹುತಗಳಾಗಿರುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹಾನಿಗೊಳಗಾದ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳೊಂದಿಗೆ ಇಂದು ಮಧ್ಯಾಹ್ನ 2.30 ಕ್ಕೆ ಬೊಮ್ಮಾಯಿ ಗೃಹ ಕಚೇರಿ ಕೃಷ್ಣಾದಿಂದ ವಿಡಿಯೋ ಸಂವಾದ ನಡೆಸಲಿದ್ದಾರೆ.
ಇಂದಿನ ಸಭೆಯಲ್ಲಿ ಮಳೆಯಿಂದಾಗಿರುವ ಹಾನಿಯ ಹಾಗೂ ರಕ್ಷಣಾ ಕಾರ್ಯದ ಜೊತೆಗೆ ಪರಿಹಾರ ಕಾರ್ಯ ಕುರಿತು ಮಾಹಿತಿ ಪಡೆದು ಅಗತ್ಯ ಸಲಹೆ, ಸೂಚನೆ ನೀಡಲಿದ್ದಾರೆ.