Karnataka News
BREAKING: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ, ಅಪಘಾತದಲ್ಲಿ 8 ಪ್ರಯಾಣಿಕರಿಗೆ ಗಾಯ

ಹಾವೇರಿ : ರಾಜ್ಯದಲ್ಲಿ ಮತ್ತೊಂದು ಖಾಸಗಿ ಬಸ್ ಅಪಘಾತವಾಗಿದ್ದು, 8 ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ಸಮೀಪ ನಡೆದಿದೆ.
ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮೋಟೆಬೆನ್ನೂರು ಗ್ರಾಮದ ಬಳಿ ಪಲ್ಟಿಯಾಗಿದ್ದು, ಬಸ್ ನಲ್ಲಿದ್ದ 8 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡವರನ್ನು ಬ್ಯಾಡಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.