Crime News
ಕಬ್ಬಿನ ಗದ್ದೆಯಲ್ಲಿ ಗಾಂಜಾ ಬೆಳೆ ಪತ್ತೆ

ಕಬ್ಬಿನ ಗದ್ದೆಯಲ್ಲಿ ಬೆಳೆದಿದ್ದ ಸಾವಿರಾರು ರೂಪಾಯಿ ಮೌಲ್ಯದ ಗಾಂಜಾ ಬೆಳೆಯನ್ನು ಪತ್ತೆ ಮಾಡಿ, ಇಬ್ಬರನ್ನು ಬಂಧಿಸುವಲ್ಲಿ ಗೋಕಾಕ ತಾಲೂಕಿನ ಕುಲಗೋಡ ಪೊಲೀಸರು ಯಶಸ್ವಿಯಾಗಿದ್ದಾರೆ.
ಗೋಕಾಕ ತಾಲೂಕಿನ ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯ ಕಬ್ಬಿನ ಗದ್ದೆಯಲ್ಲಿ ಕಬ್ಬಿನ ಬೆಳೆ ನಡುವೆ ಗಾಂಜಾ ಗಿಡಗಳನ್ನು ಹಾಕಲಾಗಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಕುಲಗೋಡ ಠಾಣೆಯ ಪಿಎಸ್ ಐ ಹಾಗೂ ಸಿಬ್ಬಂದಿಗಳು ಸುಮಾರು 95 ಕೆಜಿ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಗಾಂಜಾ ಬೆಳೆದಿದ್ದ ಬಸಪ್ಪ ಮತ್ತು ಸಿದ್ದಪ್ಪ ಎನ್ನುವ ತಂದೆ ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಕುಲಗೋಡ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.