Karnataka News
ಹಲಕಿ ಕ್ರಾಸ್ ಬಳಿ ಶುಕ್ರವಾರ ಎರಡು ಬಸ್ಸುಗಳ ಮುಖಾಮುಖಿ ಡಿಕ್ಕಿ, 10ಕ್ಕೂ ಹೆಚ್ಚು ಮಂದಿಗೆ ಗಾಯ

ಬೆಳಗಾವಿ: ಬೆಳಗಾವಿ- ಬಾಗಲಕೋಟೆಯ ರಾಜ್ಯ ಹೆದ್ದಾರಿಯಲ್ಲಿ ಹಲಕಿ ಕ್ರಾಸ್ ಬಳಿ ಶುಕ್ರವಾರ ಎರಡು ಸರ್ಕಾರಿ ಬಸ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ, 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಬೆಳಗಾವಿಯಿಂದ ಬಾಗಲಕೋಟೆಯತ್ತ ತೆರಳುತ್ತಿದ್ದ ಬಸ್ ಹಾಗೂ ಯರಗಟ್ಟಿಯಿಂದ ಬೆಳಗಾವಿಯತ್ತ ಬರುತ್ತಿದ್ದ ಇನ್ನೊಂದು ಬಸ್ ಮಧ್ಯೆ ಡಿಕ್ಕಿ ಸಂಭವಿಸಿದೆ.
ಗಾಯಗೊಂಡವರನ್ನು ಬೆಳಗಾವಿಯ ವಿವಿಧ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಎರಡೂ ಬಸ್ಸುಗಳ ಚಾಲಕರು ವೇಗ ನಿಯಂತ್ರಣ ಮಾಡಿದ್ದರಿಂದ ಹೆಚ್ಚಿನ ಅನಾಹುತ ಆಗಿಲ್ಲ ಎಂದು ಪ್ರತ್ಯಕ್ಷ ದರ್ಶಿಗಳು ಮಾಹಿತಿ ನೀಡಿದರು.
ಮುರಗೋಡ ಪೊಲೀಸರು ಸ್ಥಳಕ್ಕೆ ಧಾವಿಸಿದರು. ಅಪಘಾತದಿಂದ ಕೆಲಕಾಲ ಹೆದ್ದಾರಿಯಲ್ಲಿ ಸಂಚಾರ ಬಂದ್ ಆಯಿತು.