
ವಿಜಯಪುರ : ಇಂದು ಬೆಳ್ಳಂಬೆಳಗ್ಗೆ ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನದ ಅನುಭವವಾಗಿದ್ದು, ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.
ವಿಜಯಪುರ ನಗರ, ಗ್ರಾಮೀಣ ಭಾಗದಲ್ಲಿ ಭೂಕಂಪನವಾಗಿದ್ದು, ಇಂದು ಬೆಳಗ್ಗೆ 6.21 ರ ಸುಮಾರಿಗೆ ವಿಜಯಪುರ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಭೂಕಂಪನವಾಗಿದ್ದು, ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.
ವಿಜಯಪುರ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಪದೇ ಪದೇ ಭೂಮಿ ಕಂಪಿಸಿದ ಅನುಭವವಾಗುತ್ತಿದ್ದು ಜನತೆ ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ.