Karnataka NewsLatest
ಹಾವೇರಿಯಲ್ಲಿ ನ.11 ರಿಂದ 86 ನೇ `ಕನ್ನಡ ಸಾಹಿತ್ಯ ಸಮ್ಮೇಳನ’

ಬೆಂಗಳೂರು : ಹಾವೇರಿಯಲ್ಲಿ ನವೆಂಬರ್ 11,12 ಮತ್ತು 13 ರಂದು 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುವ ಸಾಧ್ಯತೆ ಇದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಷಿ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಕನ್ನಡ ರಾಜ್ಯೋತ್ಸವದೊಂದಿಗೆ ಕನ್ನಡ ಸಾಹಿತ್ಯ ಸಮ್ಮೇಳನ ಆಚರಿಸಲು ನಿರ್ಧರಿಸಿ ನವೆಂಬರ್ ತಿಂಗಳಲ್ಲಿ ದಿನಾಂಕ ನಿಗದಿಪಡಿಸಲಾಗಿದೆ. ರಾಜ್ಯ ಸರ್ಕಾರವೇ ಸಮ್ಮೇಳನದ ದಿನಾಂಕವನ್ನು ಅಧಿಕೃತವಾಗಿ ಘೋಷಿಸಲಿದೆ ಎಂದು ಹೇಳಿದ್ದಾರೆ.
ನವೆಂಬರ್ 11 ರಂದು ಕನಕ ಜಯಂತಿ, 12 ರಂದು ಎರಡನೇ ಶನಿವಾರ ಹಾಗೂ 13 ರಂದು ಭಾನುವಾರ ಈ ಮೂರು ದಿನಗಳು ಸರ್ಕಾರಿ ರಜೆ ಇರುವುದರಿಂದ ಶಾಲಾ ಶಿಕ್ಷಕರು ಹಾಗೂ ಸರ್ಕಾರಿ ನೌಕರರು ಸೇರಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಮ್ಮೇಳನದಲ್ಲಿ ಭಾಗವಹಿಸಬಹುದಾಗಿದೆ ಎಂಬ ಕಾರಣಕ್ಕೆ ಈ ದಿನಾಂಕದಂದು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.