fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
InternationalKarnataka NewsNational

ಜಪಾನ್‌ನ ಮಾಜಿ ಪ್ರಧಾನಿ ಶಿಂಝೊ ಅಬೆ ಗೌರವಾರ್ಥ ದೇಶದಲ್ಲಿ ಶನಿವಾರ ಶೋಕಾಚರಣೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಹೊಸದಿಲ್ಲಿ, ಜು. 8: ಜಪಾನ್‌ನ ಮಾಜಿ ಪ್ರಧಾನಿ ಶಿಂಝೊ ಅಬೆ ನಿಧನದ ಹಿನ್ನೆಲೆಯಲ್ಲಿ ಸಂತಾಪ ಸೂಚಕವಾಗಿ ದೇಶಾದ್ಯಂತ ಶನಿವಾರ ರಾಷ್ಟ್ರೀಯ ಶೋಕಾಚರಣೆ ನಡೆಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಘೋಷಿಸಿದ್ದಾರೆ. ಜಗತ್ತನ್ನು ಉತ್ತಮ ಸ್ಥಳವನ್ನಾಗಿ ಮಾಡಲು ಅವರು ತಮ್ಮ ಬದುಕನ್ನೇ ಮುಡಿಪಾಗಿಟ್ಟರು.

ಅವರು ಭಾರತದೊಂದಿಗೆ ಉತ್ತಮ ಒಡನಾಟ ಹೊಂದಿದ್ದರು ಎಂದು ಅವರು ಹೇಳಿದ್ದಾರೆ.

”ನನ್ನ ಹಾಗೂ ಅಬೆ ಅವರ ಗೆಳೆತನ ಹಲವು ವರ್ಷಗಳದ್ದು. ನಾನು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗಲೇ ಅವರ ಪರಿಚಯ ಇತ್ತು. ನಾನು ಪ್ರಧಾನಿಯಾದ ಬಳಿಕವೂ ಗೆಳೆತನ ಮುಂದುವರಿಯಿತು. ಆರ್ಥಿಕತೆ ಹಾಗೂ ಜಾಗತಿಕ ವ್ಯವಹಾರಗಳ ಕುರಿತ ಅವರು ತೀಕ್ಷ್ಮ ತಿಳುವಳಿಕೆ ನನ್ನ ಮೇಲೆ ಆಳವಾಗಿ ಪ್ರಭಾವ ಬೀರಿತ್ತು” ಎಂದು ಅವರು ಹೇಳಿದ್ದಾರೆ.

ಇತ್ತೀಚೆಗೆ ಜಪಾನ್‌ಗೆ ಭೇಟಿ ನೀಡಿದ ಸಂದರ್ಭ, ತನಗೆ ಅಬೆ ಅವರನ್ನು ಮತ್ತೊಮ್ಮೆ ಭೇಟಿಯಾಗುವ ಅವಕಾಶ ದೊರಕಿತು. ಈ ಸಂದರ್ಭ ನಾವು ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದೆವು ಎಂದು ಅವರು ಹೇಳಿದರು.

”ಅವರಲ್ಲಿ ಜಾಣ್ಮೆ ಹಾಗೂ ತಿಳುವಳಿಕೆ ಯಾವಾಗಲೂ ಇತ್ತು. ಅವರ ಕುಟುಂಬ ಹಾಗೂ ಜಪಾನ್ ಜನರ ಬಗ್ಗೆ ಸಂತಾಪ ವ್ಯಕ್ತಪಡಿಸುತ್ತೇನೆ” ಎಂದು ಪ್ರಧಾನಿ ಹೇಳಿದ್ದಾರೆ.

”ಭಾರತ ಹಾಗೂ ಜಪಾನ್ ಸಂಬಂಧಗಳನ್ನು ವಿಶೇಷ ವ್ಯೂಹಾತ್ಮಕ ಹಾಗೂ ಜಾಗತಿಕ ಪಾಲುದಾರಿಕೆಯ ಮಟ್ಟಕ್ಕೆ ಮೇಲೆತ್ತುವಲ್ಲಿ ಅಬೆ ಅವರು ಅಪಾರ ಕೊಡುಗೆ ನೀಡಿದ್ದಾರೆ. ಇಂದು ಅವರಿಗಾಗಿ ಜಪಾನ್‌ನೊಂದಿಗೆ ಭಾರತ ದುಃಖಿಸುತ್ತಿದೆ. ಈ ಸಂದರ್ಭದಲ್ಲಿ ಜಪಾನ್‌ನ ನಮ್ಮ ಸಹೋದರ, ಸಹೋದರಿಯರೊಂದಿಗೆ ನಾವು ಬೆಂಬಲವಾಗಿ ನಿಲ್ಲುತ್ತೇವೆ” ಎಂದು ಪ್ರಧಾನಿ ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: