Karnataka News
ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಪ್ರಯಾಣಿಕರಿಗೆ ಗಾಯ

ಸಕಲೇಶಪುರ(ಹಾಸನ): ತಾಲ್ಲೂಕಿನ ಮಾರನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದು, ಬಸ್ ನಲ್ಲಿದ್ದ 40 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿವೆ.
ಹಾಸನದಿಂದ ಮಂಗಳೂರಿಗೆ ತೆರಳುತ್ತಿದ್ದ ಸಾರಿಗೆ ಸಂಸ್ಥೆ ಬಸ್, ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.
ಬಸ್ ನಲ್ಲಿ ಇದ್ದ 15 ಮಂದಿಗೆ ತೀವ್ರ ಸ್ವರೂಪದ ಗಾಯವಾಗಿದ್ದು, ಗಾಯಾಳುಗಳನ್ನು ಸಕಲೇಶಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗಿದೆ. ಒಬ್ಬರಿಗೆ ತಲೆಗೆ ತೀವ್ರ ಪೆಟ್ಟಾಗಿದೆ.
ಅಪಘಾತದ ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ. ವಾಹನ ಸಂಚಾರಕ್ಕೆ ಯಾವುದೇ ತೊಂದರೆ ಆಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.