ನನ್ನ ಪ್ರಾಣ ಇರುವವರೆಗೂ ಈದ್ಗಾ ಮೈದಾನ ತೆಗೆಯಲು ಸಾಧ್ಯವೇ ಇಲ್ಲ: ಶಾಸಕ ಜಮೀರ್ ಅಹಮದ್

ಬೆಂಗಳೂರು: ನನ್ನ ಪ್ರಾಣ ಇರೋವರೆಗೂ ಈದ್ಗಾ ಮೈದಾನ ತೆಗೆಯಲು ಸಾಧ್ಯವಿಲ್ಲ ಎಂದು ಶಾಸಕ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಚಾಮರಾಜಪೇಟೆಯ ವೆಂಕಟಾರಾಮ್ ಕಲಾ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲರೂ ಆಟದ ಮೈದಾನ ಉಳಿಸಬೇಕು ಎಂದು ಸಭೆ ಮಾಡಿ ಒತ್ತಾಯಿಸಿದರು.
ಆಟದ ಮೈದಾನ ಎಲ್ಲಿಗೆ ಹೋಗಿದೆ? ಆಟದ ಮೈದಾನವನ್ನ ಯಾರು ತೆಗೆದಿದ್ದಾರೆ? ಎಂಎಲ್‌ಎ, ಬಿಬಿಎಂಪಿ, ವಕ್ಫ್ ಬೋರ್ಡ್ ಯಾರಾದ್ರೂ ಇಲ್ಲಿ ಆಟದ ಮೈದಾನ ಇರುವುದಿಲ್ಲ ಎಂದು ಹೇಳಿಕೆ ಕೊಟ್ಟಿದ್ದಾರೆಯೇ ಎಂದು ಪ್ರಶ್ನಿಸಿದರು. ಚಾಮರಾಜಪೇಟೆಯಲ್ಲಿ ಆಟ ಆಡಲು ಜಾಗ ಸಿಗುತ್ತಿಲ್ಲ ಎಂದು ಹಲವರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು,
ಆಟ ಆಡೋಕೆ ಜಾಗ ಕೊಡೊಲ್ಲ ಅಂತ ಯಾರಾದರೂ ಹೇಳಿದ್ದಾರಾ ಎಂದು ಕೇಳಿದರು. ನನ್ನ ಪ್ರಾಣ ಇರುವವರೆಗೂ ಈ ಮೈದಾನ ಮೈದಾನ ತೆಗೆಯಲು ಸಾಧ್ಯವೇ ಇಲ್ಲ. ಇದು ಆಟದ ಮೈದಾನವಾಗಿಯೇ ಉಳಿಯುತ್ತದೆ. 1871ರಿಂದಲೂ ಇದನ್ನು ಈದ್ಗಾ ಮೈದಾನವಾಗಿ ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು. ಸಭೆಯ ಆರಂಭದಿಂದಲೂ ಆಟದ ಮೈದಾನವಾಗಿ ಉಳಿಸಬೇಕು ಎನ್ನುವ ಬಗ್ಗೆಯೇ ಹೆಚ್ಚಿನ ಒತ್ತಾಯ ಕೇಳಿಬಂತು. ಕೈ ಎತ್ತುವ ಮೂಲಕ ಒಮ್ಮತದ ನಿರ್ಧಾರ ತೆಗೆದುಕೊಂಡರು. ಇದಕ್ಕೆ ಜಮೀರ್ ಅಹಮದ್ ಸಹ ಸಹಮತ ವ್ಯಕ್ತಪಡಿಸಿದರು.