Karnataka News
BREAKING NEWS : ಬೆಳ್ಳಂಬೆಳಗ್ಗೆ ಕೊಡಗಿನಲ್ಲಿ ಮತ್ತೆ ಕಂಪಿಸಿದ ಭೂಮಿ : ಆತಂಕದಲ್ಲಿ ಜನರು

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಭೂಮಿ ಕಂಪಿಸಿದ್ದು, ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿ ಬಂದಿರುವ ಘಟನೆ ನಡೆದಿದೆ.
ಇಂದು ಬೆಳಗ್ಗೆ 6.24 ರ ಸುಮಾರಿಗೆ ಭೂಕಂಪನದ ಅನುಭವವಾಗಿದ್ದು, ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಮಡಿಕೇರಿ ತಾಲೂಕಿನ ಚೆಂಪು, ಸಂಪಾಜೆ, ಕರಿಕೆ, ಗೂನಡ್ಕ ಭಾಗದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.
ಇನ್ನೂ ನಿನ್ನೆ ಬೆಳಗ್ಗೆ ವಿಜಯಪುರ, ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಭೂಕಂಪನವಾಗಿತ್ತು. ಇಂದು ಕೊಡಗು ಜಿಲ್ಲೆಯಲ್ಲಿ ಭೂಕಂಪನದ ಅನುಭವವಾಗಿದೆ.