
ಹುಬ್ಬಳ್ಳಿ: ಬಕ್ರೀದ್ ಹಬ್ಬದ ಅಂಗವಾಗಿ (ಈದ್ ಉಲ್ ಅಜ್ಹಾ) ಮುಸ್ಲಿಂ ಸಮುದಾಯದವರು ನಗರದ ಚನ್ನಮ್ಮ ವೃತ್ತ ಮತ್ತು ಹಳೇ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಭಾನುವಾರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಧರ್ಮಗುರುಗಳು ಬಕ್ರೀದ್ ಸಂದೇಶ ನೀಡಿದರು.
ಶಾಸಕ ಪ್ರಸಾದ ಅಬ್ಬಯ್ಯ ಅವರು ಪ್ರಾರ್ಥನಾ ಸ್ಥಳಕ್ಕೆ ಭೇಟಿ ನೀಡಿ, ಮುಸ್ಲಿಂ ಮುಖಂಡರಿಗೆ ಹಬ್ಬದ ಶುಭಾಶಯ ಕೋರಿದರು.
ಅಂಜುಮನ್ ಸಂಸ್ಥೆ ಅಧ್ಯಕ್ಷ ಯೂಸುಫ ಸವಣೂರ, ಉಪಾಧ್ಯಕ್ಷ ಅಲ್ತಾಫ ಕಿತ್ತೂರ, ಕಾಂಗ್ರೆಸ್ ಮುಖಂಡರಾದ ಎಂ.ಎಸ್. ಹಿಂಡಸಗೇರಿ, ಸದಾನಂದ ಡಂಗನವರ ಸೇರಿದಂತೆ ವಿವಿಧ ಮುಖಂಡರು ಇದ್ದರು.