
ಹಾಸನ : ಶೀಘ್ರವೇ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಪ್ರಮುಖ ನಾಯಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಲಕ್ಷ್ಮಣ ಸವದಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 2 ತಿಂಗಳಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಅನೇಕರು ಬಿಜೆಪಿಗೆ ಸೇರಲಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಯಾವಾಗ ಮಾಡಬೇಕೆಂಬುದು ರಾಜ್ಯ ಮತ್ತು ಕೇಂದ್ರದ ನಾಯಕರು ನಿರ್ಧರಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಸಚಿವ ಉಮೇಶ್ ಕತ್ತಿ ಅವರ ಪ್ರತ್ಯೇಕ ರಾಜ್ಯದ ಕುರಿತ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಉಮೇಶ್ ಕತ್ತಿ ಯಾವ ಹಿನ್ನೆಲೆಯಲ್ಲಿ ಈ ಹೇಳಿಕೆ ನೀಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ನಾಳೆ ಅವರನ್ನು ಭೇಟಿಯಾಗಿ ಈ ಬಗ್ಗೆ ಚರ್ಚೆ ಮಾಡುವುದಾಗಿ ಹೇಳಿದ್ದಾರೆ.