Crime NewsKarnataka News
Trending
ಸಂಕೇಶ್ವರ ಪೊಲೀಸರಿಂದ ಭರ್ಜರಿ ದಾಳಿ: ಟ್ರಕ್‍ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 12 ಕ್ವಿಂಟಾಲ್ ರೇಶನ್ ಅಕ್ಕಿ ಜಪ್ತಿ

ಟ್ರಕ್‍ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ರೇಶನ್ ಅಕ್ಕಿಯನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಹುಕ್ಕೇರಿ ತಾಲೂಕಿನ ಸಂಕೇಶ್ವರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೆಳಗಾವಿಯ ಗಾಂಧಿನಗರದಿಂದ ಕೊಲ್ಲಾಪುರಕ್ಕೆ ರೇಶನ್ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಸಂಕೇಶ್ವರ ಠಾಣೆ ಪಿಎಸ್‍ಐ ಮತ್ತು ಸಿಬ್ಬಂದಿಗಳು 12 ಕ್ವಿಂಟಾಲ್ ಅಕ್ಕಿಯನ್ನು ಟ್ರಕ್ ಸಮೇತ ಜಪ್ತಿ ಮಾಡಿದ್ದಾರೆ. ಏಂ 24 1751 ಅಶೋಕ್ ಲೈಲೆಂಡ್ ಟ್ರಕ್ ಇದಾಗಿದೆ. ಬೆಳಗಾವಿ ತಾಲೂಕಿನ ಬಸವಣ್ಣ ಕುಡಚಿ ಶಾಂತಿನಾಥ ಪಾಟೀಲ್ ಹಾಗೂ ಚಾಲಕ ಸಂಕೇಶ್ವರದ ವಡ್ಡರ ಗಲ್ಲಿಯ ರಮೇಶ್ ನಾರಾಯಣ್ ಮನುವಡ್ಡರ್‍ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಪೊಲೀಸರ ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.