
ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳನ್ನು ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹ, ಭೂಕುಸಿತ, ಮನೆ-ಬೆಳೆ ಹಾನಿ ಉಂಟಾಗಿದೆ. ಈ ಹಿನ್ನೆಲೆ ಮಳೆ ಹಾನಿ ಪ್ರದೇಶಕ್ಕೆ ನಾಳೆಯಿಂದ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಈ ಕುರಿತು ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಸಿಎಂ, ಕಳೆದ 10 ದಿನಗಳಿಂದ ವ್ಯಾಪಕ ಮಳೆಯಾಗ್ತಿದೆ. ನಾಳೆಯಿಂದ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಕಾರವಾರಕ್ಕೆ ಭೇಟಿ ಕೊಡ್ತೀನಿ. ಮಳೆ ಹಾನಿ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳ ಬಗ್ಗೆ ಸಭೆ ನಡೆಸುತ್ತೇನೆ. ಅಲ್ಲಿನ ಸ್ಥಿತಿಗತಿಯ ಬಗ್ಗೆ ಪರಿಶೀಲನೆ ನಡೆಸಿ ಅಲ್ಲೇ ಸೂಚನೆಗಳನ್ನ ನೀಡುವೆ ಎಂದರು.
ಮಂಗಳವಾರ ಕೊಡಗು ಮತ್ತು ಮಂಗಳೂರಿಗೆ ಭೇಟಿ ಕೊಡುವೆ. ಅಂದು ರಾತ್ರಿ ಉಡುಪಿಯಲ್ಲಿ ವಾಸ್ತವ್ಯ ಮಾಡ್ತೀನಿ. ಬುಧವಾರ ಕಾರವಾರ ಜಿಲ್ಲೆಗೆ ಭೇಟಿ ನೀಡ್ತೀನಿ ಎಂದು ಸಿಎಂ ಹೇಳಿದರು.