Karnataka NewsPolitics
ಶಾಸಕಿ ಅಂಜಲಿ ನಿಂಬಾಳ್ಕರ್ ಅವರ ಅಧ್ಯಕ್ಷತೆಯಲ್ಲಿ ತಹಶೀಲ್ದಾರ್ ಕಚೇರಿಯಲ್ಲಿ ಸಭೆ ಪ್ರವಾಹ ನಿಯಂತ್ರಣಕ್ಕೆ ಅಧಿಕಾರಿಗಳಿಗೆ ಸೂಚನೆ

ಬೆಳಗಾವಿ : ಜಿಲ್ಲೆಯಾದ್ಯಂತ ಕಳೆದ ನಾಲ್ಕೈದು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಕಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಜಿಲ್ಲಾಡಳಿತ ಮುಂಜಾಗ್ರತ ಕ್ರಮವಾಗಿ ತಾಲೂಕ ಆಡಳಿತಗಳಿಗೆ ಕ್ರಮ ಕೈಗೊಳ್ಳಲು ಆದೇಶ ನೀಡಿದ್ದಾರೆ.
ಈ ಹಿನ್ನಲೆಯಲ್ಲಿ ಖಾನಾಪುರ ತಾಲೂಕಿನ ಮಲಪ್ರಭಾ ನದಿಯ ನೀರಿನ ಮಟ್ಟ ಹೆಚ್ಚಾಗುತ್ತಿರುವುದರಿಂದ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಅವರ ಅಧ್ಯಕ್ಷತೆಯಲ್ಲಿ ತಹಶೀಲ್ದಾರ್ ಕಚೇರಿಯಲ್ಲಿ ಸಭೆ ಕರೆದು ಸಭೆಯ ಕರೆಯಲಾಯಿತು.
ಸಭೆ ಅಧ್ಯಕ್ಷತೆ ವಹಿಸಿದ ಶಾಸಕಿ ಅವರು, ಪ್ರವಾಹ ಸ್ಥಿತಿ ಉದ್ಬವಗೊಂಡ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಕ್ಕಾಗಿ ನದಿ ದಡದಲ್ಲಿರುವ ಜನರನ್ನು ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳಬೇಕಾದ ಸಂದರ್ಭದಲ್ಲಿ ತಾಲೂಕ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.ಬಳಿಕ ಪೂರ್ವಭಾವಿ ಸಭೆಯಲ್ಲಿ ಮಾಹಿತಿ ಸಂಗ್ರಹ ಮಾಡಿದರು
ಈ ಸಭೆಯಲ್ಲಿ ಖಾನಾಪುರ ತಹಶೀಲ್ದಾರ್ ಸೇರಿ ಅಧಿಕಾರಿಗಳು ಉಪಸ್ಥಿತರಿದ್ದರು.