fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Feature articlesKarnataka NewsScience

ಜಿರೋ ಟ್ರಾಫಿಕ್​ನಲ್ಲಿ ಹೃದಯ ರವಾನೆ; ಬೆಳಗಾವಿ ಕೆಎಲ್ಇ ಆಸ್ಪತ್ರೆ ತಲುಪಿದ 15 ವರ್ಷ ವಯಸ್ಸಿನ ಬಾಲಕಿಯ ಹೃದಯ.

ಬೆಳಗಾವಿ ತಲುಪಿದ ಧಾರವಾಡ ಬಾಲಕಿಯ ಹೃದಯ; ನಾಲ್ವರ ಬಾಳಿಗೆ ಬೆಳಕಾದ 15ರ ಬಾಲಕಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಧಾರವಾಡದ ಎಸ್ ಡಿ ಎಂ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ಮೆದಳು ನಿಷ್ಕ್ರಿಯಗೊಂಡು ಜೀವನ್ಮರಣದ ನಡುವೆ ಹೋರಾಡುತ್ತಿದ್ದ 15 ವರ್ಷದ ಬಾಲಕಿ ತನ್ನ ಅಂಗಾಂಗಳನ್ನು ದಾನ ಮಾಡಿ 4 ಜನರ ಜೀವ ಉಳಿಸಿ ಸಮಾಜಕ್ಕೆ ಮಾದರಿಯಾಗಿದ್ದಾಳೆ.

ಹೃದಯವನ್ನು ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗೆ ಕಸಿ ಮಾಡಲು ಗ್ರೀನ ಕಾರಿಡಾರ ಮೂಲಕ ಧಾರವಾಡದಿಂದ ರಸ್ತೆ ಮೂಲಕ ತೆಗೆದುಕೊಂಡು ಬರಲಾಯಿತು. ಒಂದು ಕಿಡ್ನಿಯನ್ನು ಎಸಡಿಎಂ ಆಸ್ಪತ್ರೆ ಹಾಗೂ ಹುಬ್ಬಳ್ಳಿಯ ತತ್ವಾದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗೆ ಕಸಿ ಮಾಡಿದರೆ, ಲೀವರ ಅನ್ನು ಬೆಂಗಳೂರಿನ ಶೇಷಾದ್ರಿಪುರಂನ ಅಪೊಲೊ ಆಸ್ಪತ್ರೆಗೆ ಏರ ಮೂಲಕ ಕಳುಹಿಸಿಕೊಟ್ಟರು. ಪೊಲೀಸರು ಸಂಪೂರ್ಣವಾಗಿ ಜೀರೋ ಟ್ರಾಫಿಕ್ ಅಥವಾ ಗ್ರೀನ ಕಾರಿಡಾರ (ಹಸಿರು ಪಥ) ಮೂಲಕ ಅಂಗಾಂಗಗಳನ್ನು ಸ್ಥಳಾಂತರಿಸಲು ಅವಕಾಶ ಕಲ್ಪಿಸಿಕೊಟ್ಟರು.


ಮೆದಳು ನಿಷ್ಕ್ರಿಯಗೊಂಡಿದ್ದರೂ ಕೂಡ ಅಂಗಾಂಗಳು ಕಾರನಿರ್ವಹಿಸುತ್ತಿದ್ದವು. ಮೆದುಳು ನಿಷ್ಕ್ರಿಯಗೊಂಡ ಬಾಲಕಿಯ ತಂದೆ ತಾಯಿ, ಕುಟುಂಬ ಸದಸ್ಯರಿಗೆ ಆಪ್ತಸಮಾಲೋಚನೆ ಮಾಡಿ, ನಿಮ್ಮ ಬಾಲಕಿ ನೀಡುವ ಅಂಗಾಂಗ ಇನ್ನೊಬ್ಬರ ಜೀವ ಉಳಿಸುತ್ತದೆ ಎಂದು ಹೇಳಿದಾಗ, ಸ್ವ ಇಚ್ಚೆಯಿಂದ ಅಂಗಾಂಗಗಳನ್ನು ದಾನ ಮಾಡಲು ಒಪ್ಪಿದರು.

ಮೆದುಳು ನಿಷ್ಕ್ರಿಯಗೊಂಡ ಬಾಲಕಿಯ ಹೃದಯವನ್ನು ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಗೋಕಾಕ ತಾಲೂಕಿನ 22 ಯುವಕನಿಗೆ ಕಸಿ ಮಾಡುವಲ್ಲಿ ಡಾ.ರಿಚರ್ಡ ಸಾಲ್ಮಾನಾ, ಡಾ. ಮೋಹನ ಗಾನ, ಡಾ. ಆನಂದ ವಾಘರಾಳಿ ಮತ್ತು ಅವರ ತಂಡವು ನಿರತರಾದರು. ಮೃತಪಟ್ಟರೂ ಕೂಡ 4 ಜನರ ಜೀವ ಉಳಿಸಿದ ಸಾರ್ಥಕತೆ ಮೆರೆದ ಬಾಲಕಿ, ಬೆಳಗಾವಿ ಹಾಗೂ ಹುಬ್ಬಳ್ಳಿ ಪೊಲೀಸ ಇಲಾಖೆಯ ಕಾರ ಅತ್ಯಂತ ಶ್ಲಾಘನೀಯವಾದ್ದು. ಅತ್ಯಂತ ಜನಸಂದಣಿ ಹಾಗೂ ಸಂಚಾರ ದಟ್ಟಣೆಯಿಂದ ಕೂಡಿದ ರಸ್ತೆಯಲ್ಲಿ ಗ್ರೀನ್ ಕಾರಿಡಾರ ನಿರ್ಮಿಸಿ ಅಂಗಾಂಗಳನ್ನು ಶೀಘ್ರ ಸ್ಥಳಾಂತರಿಸಲು ತೀವ್ರವಾದ ಮಳೆಯಲ್ಲಿಯೇ ನೆನೆಯುತ್ತ ಅವಕಾಶ ಕಲ್ಪಿಸಿಕೊಟ್ಟರು.

ಅಂಗಾಂಗಳನ್ನು ದಾನ ಮಾಡಿದ ಬಾಲಕಿ ಹಾಗೂ ಅವಳ ಕುಟುಂಬ ಸದಸ್ಯರು, ಪೋಲಿಸರ ಕಾರವನ್ನು ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ, ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಎಂ.ವಿ ಜಾಲಿ ಹಾಗೂ ಆಡಳಿತ ಮಂಡಳಿ ಸದಸ್ಯರು ಅಭಿನಂದಿಸಿದ್ದಾರೆ.

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: