fbpx
Karnataka News

ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ದಿಡೀರ್ ವರ್ಗಾವಣೆ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸರಿಸುಮಾರು ಎರಡು ವರ್ಷ 11 ತಿಂಗಳ ಕಾಲ ಜಿಲ್ಲಾಧಿಕಾರಿ ಆಗಿ ಸೇವೆ ಸಲ್ಲಿಸಿದ ಆರ್.ಲತಾ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಆಗಿ ನೇಮಕ ಮಾಡಲಾಗಿದೆ ಆದರೆ ಚಿಕ್ಕಬಳ್ಳಾಪುರ ಜಿಲ್ಲೆಗೆ ಯಾರನ್ನು ಸಹ ಜಿಲ್ಲಾಧಿಕಾರಿ ಆಗಿ ಸರ್ಕಾರ ನೇಮಕ ಮಾಡಿಲ್ಲ.

 

ಜಿಲ್ಲೆಯಲ್ಲಿ ನಿವೇಶನರಹಿತ ಮತ್ತು ವಸತಿಹೀನರನ್ನು ಗುರುತಿಸಿ ಅವರಿಗೆ ನಿವೇಶನ ಮತ್ತು ವಸತಿ ಸೌಲಭ್ಯವನ್ನು ಕಲ್ಪಿಸುವ ಸಲುವಾಗಿ ರಾಜ್ಯದಲ್ಲಿ ಮಾತ್ರವಲ್ಲದೇ ಇಡೀ ದೇಶದಲ್ಲಿ ಮೊದಲ ಬಾರಿಗೆ 1158 ಎಕರೆ ಮತ್ತು ಇತರೆ ಉದ್ದೇಶಗಳಿಗೆ 564 ಎಕರೆ ಜಮೀನು ಸಹಿತ 1722 ಎಕರೆ ಜಮೀನು ಮಂಜೂರು ಮಾಡುವ ಗಮನಸೆಳೆದಿದ್ದರು ಅದರಲ್ಲದೆ ರಾಜ್ಯದಲ್ಲಿ ಸಾರ್ವಜನಿಕ ಸೇವೆಗಾಗಿ ರಾಜ್ಯ ರಾಜ್ಯದಲ್ಲಿ ಗಮನಸೆಳೆದಿದ್ದರು.

ಜಿಲ್ಲೆಯಲ್ಲಿ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿ ಸಕಾಲದಲ್ಲಿ ವಿಲೇವಾರಿ ಸತತವಾಗಿ ಜಿಲ್ಲೆಯನ್ನು 50 ಬಾರಿ ರಾಜ್ಯದಲ್ಲಿ ಪ್ರಥಮ ಸ್ಥಾನವನ್ನು ಪಡೆದ ಕೀರ್ತಿ ಜಿಲ್ಲಾಧಿಕಾರಿ ನೇತೃತ್ವದ ಜಿಲ್ಲಾಡಳಿತಕ್ಕೆ ಸಲ್ಲುತ್ತದೆ ಎಂದರು ತಪ್ಪಾಗಲಾರದು ಇವರ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರದ ಸಕಾಲ ಸಚಿವರು ಅಭಿನಂದಿಸಿದರು.

 

ಜಿಲ್ಲೆಯಲ್ಲಿ ಬಹುನಿರೀಕ್ಷಿತ ಸರ್ಕಾರಿ ವೈದ್ಯಕೀಯ ಕಾಲೇಜಿನ ಕಾಮಗಾರಿಯನ್ನು ವೇಗವಾಗಿ ಮುಗಿಸಲು ವಿಶೇಷವಾಗಿ ಗಮನಹರಿಸಿ ಜಿಲ್ಲಾಧಿಕಾರಿಗಳು ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜಿನ ಸಿದ್ದೀಕ್ ಅವರನ್ನು ಇತ್ತೀಚಿಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಇಬ್ಬರ ಸೇವೆಯನ್ನು ಪ್ರಶಂಸಿದರು.

ವಿಶ್ವ ವಿಖ್ಯಾತ ನಂದಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಮಾಡಲು ವಿಶೇಷ ಗಮನವಹಿಸಿದ ಜಿಲ್ಲಾಧಿಕಾರಿ ಆರ್.ಲತಾ ಅವರು ಜಿಲ್ಲೆಯ ಇತಿಹಾಸದಲ್ಲಿ ಮೊದಲ ಬಾರಿಗೆ ನಂದಿಯ ಶ್ರೀ ಬೋಗನಂದೀಶ್ವರ ದೇವಾಲಯದಲ್ಲಿ ಶಿವೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಲು ಯಶಸ್ವಿಯಾಗಿದ್ದರು ಅಲ್ಲದೇ ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಶೈಕ್ಷಣಿಕ ಕೇಂದ್ರ ಮಾಡುವ ಸಲುವಾಗಿ ವಿಶೇಷ ಆಸಕ್ತಿವಹಿಸಿದರು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅಗ್ರಸ್ಥಾನವನ್ನು ಪಡೆದಿದ್ದು ಇತಿಹಾಸ.

ಜಿಲ್ಲೆಯ ಎಲ್ಲಾ ನಾಗರಿಕರಿಗೆ ಉತ್ತಮ ವೈದ್ಯಕೀಯ ಸೇವೆಯನ್ನು ಒದಗಿಸುವ ಸಲುವಾಗಿ ಜಿಲ್ಲೆಯಲ್ಲಿ ಆರೋಗ್ಯಮೇಳವನ್ನು ಮಾಡಿ ಅನೇಕರಿಗೆ ಅನುಕೂಲ ಕಲ್ಪಿಸಿದರು ಆರೋಗ್ಯ ಮೇಳ ಗಿನ್ನಿಸ್ ಬುಕ್ ವಲ್ಡ್ ರೆಕಾರ್ಡ್ ಪುಸ್ತಕದಲ್ಲಿ ದಾಖಲು ಮಾಡುವಂತೆ ಮಾಡಿದರು ಅದೇ ರೀತಿಯ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಜಾಗ ಮಂಜೂರು ಮಾಡಿದರು ಹಾಗೆಯೇ ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಕೈಗೊಂಡ ಬಿಗಿಕ್ರಮಗಳ ಜೊತೆಗೆ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸಿಎಸ್‍ಆರ್ ಫಂಡ್ ಬಳಸಿಕೊಂಡು ಆಮ್ಲಜನಕ ಘಟಕಗಳನ್ನು ಸ್ಥಾಪಿಸಿ ಇಡೀ ಜಿಲ್ಲೆಯಲ್ಲಿ ಜನಪ್ರಿಯ ಜಿಲ್ಲಾಧಿಕಾರಿಯಾಗಿ ಖ್ಯಾತಿ ಹೊಂದಿದ್ದರು.

ಅದಲ್ಲದೆ ಜಿಲ್ಲೆಯಲ್ಲಿ ನೆನೆಗುದಿಗೆ ಬಿದ್ದಿದ್ದ ಅನೇಕ ಭವನಗಳಿಗೆ ಜಮೀನು ಮಂಜೂರು ಮಾಡಿದ್ದರು ಚಿಕ್ಕಬಳ್ಳಾಪುರದ ಕಂದವಾರದಲ್ಲಿ ಥೀಮ್‍ಪಾರ್ಕ್ ಸ್ಥಾಪನೆ ಮಾಡಲು ವಿಶೇಷ ಗಮನಹರಿಸಿದ ಜಿಲ್ಲಾಧಿಕಾರಿಗಳು ಅನೇಕ ಗ್ರಾಮಗಳಿಗೆ ಸ್ಮಶಾನಕ್ಕೆ ಜಾಗವನ್ನು ಮಂಜೂರು ಮಾಡಿ ಗಮನಸೆಳೆದಿದ್ದರು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ರಚನೆಯಾದ ಹಾಲು ಒಕ್ಕೂಟದ ಆಡಳಿತಾಧಿಕಾರಿಯಾಗಿ ನೇಮಕಗೊಂಡಿದ್ದ ಜಿಲ್ಲಾಧಿಕಾರಿಗಳು ಮುಂದಿನ ದಿನಗಳಲ್ಲಿ ಅನೇಕ ರೀತಿಯ ಬದಲಾವಣೆಗಳನ್ನು ತರಹ ಸಂಕಲ್ಪವನ್ನು ಮಾಡಿದರು ಈ ಮಧ್ಯೆಯೇ ಸರ್ಕಾರ ಅವರನ್ನು ದಿಢೀರ್ ಆಗಿ ವರ್ಗಾವಣೆ ಮಾಡಿದೆ.

ರಾಜ್ಯಮಟ್ಟದ ಕಾರ್ಯಕ್ರಮ: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಸರ್ಕಾರ ಜಾರಿಗೊಳಿಸಿರುವ ರೈತರ ಮನೆಬಾಗಿಲಿಗೆ ಕಂದಾಯ ದಾಖಲೆಗಳ ಕಾರ್ಯಕ್ರಮವನ್ನು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿದರು ಸ್ವತಃ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಉದ್ಘಾಟಿಸಿದರು ಈ ತಿಂಗಳಿನಲ್ಲಿ ಗೌರಿಬಿದನೂರು ತಾಲೂಕಿನಲ್ಲಿ ಕಂದಾಯ ಸಚಿವರ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದ್ದರು.

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published. Required fields are marked *

error: Content is protected !!
%d bloggers like this: