National
ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ಜಾಮೀನು ಅರ್ಜಿ ವಿಚಾರಣೆ ಜುಲೈ 14ಕ್ಕೆ ಮುಂದೂಡಿಕೆ

ನವದೆಹಲಿ: ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಜುಲೈ 14 ಕ್ಕೆ ಮುಂದೂಡಿದೆ.
ಮೊಹಮ್ಮದ್ ಜುಬೈರ್ ಸಂಬಂಧ ದೆಹಲಿ ವಕೀಲರು ಈ ವಿಷಯದಲ್ಲಿ ವಾದ ಮಂಡಿಸಲು ಸಮಯ ಕೋರಿದ್ದರು.
ತನಿಖಾಧಿಕಾರಿಯ ಮನವಿಯನ್ನು ಸಮ್ಮತಿಸಿ, ಹೆಚ್ಚುವರಿ ಸೆಷನ್ ನ್ಯಾಯಾಧೀಶ ದೇವೆಂದರ್ ಕುಮಾರ್ ಜಂಗಾಲ ಅವರು ವಿಚಾರಣೆಯನ್ನು ಜುಲೈ 14 ಕ್ಕೆ ಮುಂದೂಡಿದ್ದಾರೆ.
ಮುನ್ನ ಸೋಮವಾರ, ಜುಬೇರ್ ಅವರ ಆಕ್ಷೇಪಾರ್ಹ ಟ್ವೀಟ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ದೆಹಲಿ ಎಫ್‌ಐಆರ್‌ನಲ್ಲಿ ಜಾಮೀನು ಕೋರಿ ಸೆಷನ್ಸ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು.
ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ ಮತ್ತೊಂದು ಪ್ರಕರಣದಲ್ಲಿ ಜುಬೈರ್ ಅವರನ್ನು ಜೂನ್ 27 ರಂದು ಬಂಧಿಸಲಾಗಿತ್ತು.