Karnataka News
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಆರ್.ಲತಾ ಅಧಿಕಾರ ಸ್ವೀಕಾರ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಆರ್.ಲತಾ ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಾ ಈ. ರವಿಕುಮಾರ್ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು. ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ತೇಜಸ್‌ಕುಮಾರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಈ ಮೊದಲು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಯಾಗಿದ್ದ ಲತಾ.ಆರ್ ಅವರು ಈ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿಯೂ ಕಾರ್ಯ ನಿರ್ವಹಿಸಿದ್ದರು.